Udupi: ಸಂಸ್ಕೃತ ಕಲಿಯದಿದ್ದರೆ ಸ್ವರ್ಗಕ್ಕೆ ಟಿಕೆಟ್‌ ಸಿಗಲ್ಲ- ಪುತ್ತಿಗೆ ಶ್ರೀಗಳ ಹೇಳಿಕೆ

Share the Article

Udupi: ಸಂಸ್ಕೃತ ಭಾಷೆಯಲ್ಲಿ ಪರ್ಯಾಯ ಪುತ್ತಿಗೆ ಸುಗಣೇಂದ್ರ ತೀರ್ಥ ಸ್ವಾಮೀಜಿಯವರು ಕೃಷ್ಣಮಠದ ರಾಜಾಂಗಣದಲ್ಲಿ ಭಾಷಣ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಮತ್ತು ವಿರೋಧಕ್ಕೆ ಕಾರಣವಾಗಿದೆ.

ಸಂಸ್ಕೃತ ಎಲ್ಲ ಭಾಷೆಗಳ ತಾಯಿ, ಉಳಿದೆಲ್ಲಾ ಭಾಷೆಗಳು ಪ್ರಾದೇಶಿಕ ಭಾಷೆಗಳು. ಆದರೇ ಸಂಸ್ಕೃತ ವಿಶ್ವಭಾಷೆಯೂ ಹೌದು, ದೇವಭಾಷೆಯೂ ಹೌದು, ಪರಲೋಕದ ಭಾಷೆಯೂ ಹೌದು. ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು. ಸಂಸ್ಕೃತ ಪವಿತ್ರ, ಶ್ರೇಷ್ಠ, ಪಾವನ ವಿಶ್ವಭಾಷೆ. ದೇವರ ಎಲ್ಲಾ ಶ್ಲೋಕಗಳು ಪೂಜೆಗಳು ಸಂಸ್ಕೃತ ಭಾಷೆಯಲ್ಲಿ ನಡೆಯುತ್ತದೆ ಎಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸ್ವಾಮೀಜಿಯ ಈ ಹೇಳಿಕೆಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

ತುಳು, ಕನ್ನಡ, ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ. ಆಂಗ್ಲ ಭಾಷೆಗಳೀಗೂ ಸಂಸ್ಕೃತವೇ ಮೂಲ ಎಂದು ಹೇಳಿದ್ದಾರೆ.

ದೇವಲೋಕದಲ್ಲಿ ವ್ಯವಹರಿಸುವುದು ಸಂಸ್ಕೃತ ಭಾಷೆಯಲ್ಲಿ. ಸಂಸ್ಕೃತ ದೇವ ಭಾಷೆ, ಸಂಸ್ಕೃತ ಗೊತ್ತಿಲ್ಲದಿದ್ದರೆ ದೇವಲೋಕಕ್ಕೆ ವೀಸಾ ಸಿಗುವುದಿಲ್ಲ. ಸ್ವರ್ಗ ಲೋಕಕ್ಕೆ ಹೋಗಬೇಕೆಂದಿದ್ದರೆ ಸಂಸ್ಕೃತ ಕಲಿಯಬೇಕು. ದೇವರ ಎಲ್ಲಾ ಶ್ಲೋಕಗಳು ಪೂಜೆಗಳು ಸಂಸ್ಕೃತ ಭಾಷೆಯಲ್ಲಿ ನಡೆಯುತ್ತಿದೆ. ಶ್ರೀ ಕೃಷ್ಣ ಮಹಾಸ್ವೋತ್ಸವವನ್ನು ದೇವರಿಗೆ ಅರ್ಪಣೆ ಮಾಡಿದ್ದು, ಈ ಸಂದರ್ಭದಲ್ಲಿ ದೇವ ಭಾಷೆ ಸಂಸ್ಕೃತದಲ್ಲಿ ನಾನು ಮಾತನಾಡಿದೆ ಎಂದು ಹೇಳಿದ್ದಾರೆ.

Leave A Reply

Your email address will not be published.