C P Yogishwar: ಟಿಕೆಟ್ ಸಿಗಲಿ, ಸಿಗದೇ ಇರಲಿ, ಇಲ್ಲಾ ಜೆಡಿಎಸ್ ಗೆ ಕೊಡಲಿ ನಾನು ಪಕ್ಷದ ಜೊತೆ ಇರ್ತ್ತೇನೆ – ದೆಹಲಿ ಭೇಟಿ ಬಳಿಕ ಬದಲಾದ ಯೋಗೇಶ್ವರ್
C P Yogishwar : ಚನ್ನಪಟ್ಟಣ ಉಪಚುನಾವಣೆ (Channapatna By Election) ಸಂಬಂಧ ದೋಸ್ತಿಗಳ ಟಿಕೆಟ್ ಫೈಟ್, ಸಭೆ, ಚರ್ಚೆಗಳ ಜೋರಾಗಿದೆ. ಈ ಎಡೆಯಲ್ಲಿ ಸಿ ಪಿ ಯೋಗೇಶ್ವರ್(C P Yogishwar)ಎರಡೂ ಪಕ್ಷದವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸದ್ದಾರು. ಆದರೀಗ ಅಚ್ಚರಿ ಎಂಬಂತೆ ಯೋಗೇಶ್ವರ್ ನಡೆಯಲ್ಲಿ ಭಾರೀ ಬದಲಾವಣೆ ಕಂಡುಬಂದಿದೆ.
ಹೌದು, ಟಿಕೆಟ್ ಬೇಕೇಬೇಕು ಎಂದು ಪಟ್ಟು ಹಿಡಿದು ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಯೋಗೇಶ್ವರ್ ಇದೀಗ ರಾಜ್ಯಕ್ಕೆ ಮರಳಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಕ್ಷ ನನ್ನ ಜೊತೆ ಇದೆ, ಪಕ್ಷದ ವರಿಷ್ಠರು ಜೊತೆಗಿದ್ದಾರೆ ಎಂದು ಎನಿಸಿದೆ. ಟಿಕೆಟ್ ಸಿಗಲಿ, ಸಿಗದೇ ಇರಲಿ ನಾನು ಪಕ್ಷದ ಜೊತೆ ಇರುತ್ತೇನೆ ಎಂದು ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು ‘ಬಿಜೆಪಿ(BJP) ರಾಜ್ಯ ಹಿರಿಯ ಮುಖಂಡರೊಂದಿಗೆ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿದ್ದೇನೆ. ನಮ್ಮ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೂ ಪರವಾಗಿಲ್ಲ. ನನ್ನ ಪಕ್ಷ ನಿಷ್ಠೆ ಅಚಲ. ಚುನಾವಣೆ ಪ್ರಕಟವಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತದೆ. ನಮ್ಮ ಹೈಕಮಾಂಡ್ ನಾಯಕರು ಹಲವು ಸಲಹೆ, ಸೂಚನೆ ನೀಡಿದ್ದಾರೆ. ಎರಡೂ ಪಕ್ಷದ ಮುಖಂಡರು ಒಟ್ಟಾಗಿ ಚುನಾವಣೆಗೆ ಹೋಗಬೇಕು. ಹಾಗಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು ಎಂದಿದ್ದಾರೆ.
ಅಲ್ಲದೆ “ನಮ್ಮ ಹೈಕಮಾಂಡ್ ನಾಯಕರು ಹಲವು ಸಲಹೆ, ಸೂಚನೆ ನೀಡಿದ್ದಾರೆ. ಎರಡೂ ಪಕ್ಷದ ಮುಖಂಡರು ಒಟ್ಟಾಗಿ ಚುನಾವಣೆಗೆ ಹೋಗಬೇಕು. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಕ್ಷೇತ್ರದ ವಿದ್ಯಮಾನದ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದೇನೆ. ಕ್ಷೇತ್ರಕ್ಕೆ ಯಾರೇ ಅಭ್ಯರ್ಥಿ ಆಗಲಿ, ಬೇಗ ತೀರ್ಮಾನ ಆದ್ರೆ ಒಳ್ಳೆಯದು. ಇದು ಉಪಚುನಾವಣೆ ಆಗಿರುವುದರಿಂದ ಇಡೀ ಸರ್ಕಾರವೇ ಬಂದು ಇಲ್ಲಿ ಚುನಾವಣೆ ಪ್ರಚಾರ ಮಾಡುತ್ತದೆ. ಈ ನಿಟ್ಟಿನಲ್ಲಿ ಎರಡೂ ಪಕ್ಷದ ಹಿರಿಯರು ಆದಷ್ಟು ಬೇಗ ತೀರ್ಮಾನ ಮಾಡಬೇಕು” ಎಂದು ಅಭಿಪ್ರಾಯಪಟ್ಟರು.