Weather forecast: ನಾಳೆ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ?
Weather forecast: ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ(Coastal district) ಅಲ್ಲಲ್ಲಿ ಸಾಮಾನ್ಯ ಮಳೆಯ(Light rain) ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಮಳೆಯಾಗಬಹುದು. ಗಾಳಿಯ ಚಲನೆ ಆಗ್ನೇಯ ಕಡೆಗೆ ಹೆಚ್ಚಿರುವುದರಿಂದ ಸುಬ್ರಮಣ್ಯ(Subrahmanya), ಸುಳ್ಯ(Sullia) ಸುತ್ತಮುತ್ತ ಭಾಗಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಜಾಸ್ತಿ ಇರಬಹುದು ಎಂದು ಹವಾಮಾನ ಇಲಾಖೆ(IMD) ಹೇಳಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಜಾಸ್ತಿ ಇರಬಹುದು.
ಮೈಸೂರು, ಚಾಮರಾಜನಗರ, ಚಿತ್ರದುರ್ಗದ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿಯ ರಾಣೆಬೆನ್ನೂರು ಸುತ್ತಮುತ್ತ ಹಾಗೂ ಉತ್ತರ ಕರ್ನಾಟಕದ ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 4 ಅಥವಾ 5ರಿಂದ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಸೆಪ್ಟೆಂಬರ್ 8ರಿಂದ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಸೆಪ್ಟೆಂಬರ್ 4ರಿಂದ ಮುಂದಿನ ದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.