Renuka Swamy Murder case: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 3991 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಫ್ಯಾನ್ಸ್ ಗಳಿಗೆ ಬಿಗ್ ರಿಲೀಫ್

Renuka Swamy Murder case:  ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ (Renuka Swamy Murder case) ಸಂಬಂಧ ಪಟ್ಟಂತೆ ಇಂದು ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ಚಾರ್ಜ್ಶೀಟ್ ಪಟ್ಟಿ ಸಲ್ಲಿಕೆ ಮಾಡಿದ್ದು, ಇದರಲ್ಲಿ ಮುಕ್ಕಾಲು ಭಾಗ ದರ್ಶನ್ ಆರೋಪಿ ಎಂದು ಸಾಬೀತು ಆಗುತ್ತೆ ಎನ್ನಲಾಗುತ್ತಿತ್ತು. ಆದರೆ ಲೆಕ್ಕಾಚಾರದಂತೆ ಆಗಿಲ್ಲ. ಇದರಿಂದ ದರ್ಶನ್ ಫ್ಯಾನ್ಸ್ ಇದೀಗ ಕೊಂಚ ನಿರಾಳವಾಗುವಂತಾಗಿದೆ.

 

ಹೌದು, ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ದರ್ಶನ್ ವಿರುದ್ಧವಾಗಿಯೇ ಇತ್ತು ಎನ್ನಲಾಗಿದೆ. ಆದ್ದರಿಂದ ದರ್ಶನ್ ಎ1 ಆರೋಪಿಯಾಗಿ, ಪವಿತ್ರಾ ಗೌಡ ಎ2 ಆರೋಪಿ ಸ್ಥಾನ ಸದ್ಯಕ್ಕೆ ಬದಲಾಗುತ್ತೆ ಎಂದು ಊಹಿಸಲಾಗಿತ್ತು. ಆದರೆ ಆ ರೀತಿ ಆಗಿಲ್ಲ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ. ಇದರಿಂದ ಪವಿತ್ರಾ ಅವರು ಎ1 ಆರೋಪಿ ಆಗಿಯೇ ಮುಂದುವರಿದಿದ್ದಾರೆ.

ಯಾಕೆಂದರೆ ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ, ಅವರು ಎ1 ಆಗಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರ ಗೌಡ ಅಲ್ಲೇ ಇರುವುದಕ್ಕೆ ಸಾಕ್ಷಿ ಸಿಕ್ಕಿದೆ. ಆತನಿಗೆ ಚಪ್ಪಲಿಯಲ್ಲಿ ಅವರು ಹೊಡೆದಿದ್ದಾರೆ. ಇನ್ನು ಪವಿತ್ರ ಗೌಡ ಮೊಬೈಲ್ ಕೃತ್ಯದ ಸ್ಥಳದಲ್ಲಿ ಆಕ್ಟೀವ್ ಆಗಿತ್ತು.

ಒಟ್ಟಿನಲ್ಲಿ ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತ ಇರುವುದು ಪತ್ತೆ ಆಗಿದೆ. ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಖಚಿತ ಮಾಹಿತಿ ಸಿಕ್ಕಂತೆ ಆಗಿದೆ.

ಈ ಎಲ್ಲಾ ಆಧಾರದ ಮೇರೆಗೆ ದರ್ಶನ್ ಎ2 ಆರೋಪಿ ಆಗಿ, ಮತ್ತು ಪವಿತ್ರಾ ಗೌಡ ಎ1 ಆರೋಪಿ ಆಗಿ ಮುಂದುವರೆದಿದ್ದು ದರ್ಶನ್ ಫ್ಯಾನ್ಸ್ ಗಳಿಗೆ ಕೊಂಚ ಸಮಾಧಾನ ತಂದಿದೆ.

Leave A Reply

Your email address will not be published.