Tumkur: ಹೆತ್ತ ತಂದೆಯಿಂದಲೇ 14 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ; ಮಗಳು ಮೂರು ತಿಂಗಳ ಗರ್ಭಿಣಿ

Share the Article

Tumkur: ತಂದೆಯಿಂದಲೇ ಅತ್ಯಾಚಾರಕ್ಕೊಳಗಾದ 14 ವರ್ಷದ ಬಾಲಕಿಯೊಬ್ಬಳು ಇದೀಗ ಗರ್ಭ ಧರಿಸಿದ ಘಟನೆಯೊಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. 14 ವರ್ಷದ ಬಾಲೆಯ ಮೇಲೆ ಕಾಮುಕ ತಂದೆ ತನ್ನ ಕಾಮದಾಹವನ್ನು ತೀರಿಸಿಕೊಂಡಿದ್ದಾನೆ. ಇವರು ಉತ್ತರ ಪ್ರದೇಶ ಮೂಲದವರು ಎನ್ನಲಾಗಿದ್ದು, ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹೊರ ರಾಜ್ಯದಿಂದ ಬಂದಿತ್ತು.

ಪಾಪಿ ತಂದೆಯ ಮೇಲೆ ಫೋಕ್ಸೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣದ ಅಡಿ ಕೇಸು ದಾಖಲಾಗಿದೆ. ಬಾಲಕಿ ಇದೀಗ ಮೂರು ತಿಂಗಳ ಗರ್ಭಿಣಿ. ಹೊನ್ನವಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply