Jammu-Kashmir Assembly Election: 10 ವರ್ಷಗಳ ಬಳಿಕ ಎಲೆಕ್ಷನ್- ಕುತೂಹಲ ಹುಟ್ಟಿಸಿದ ಚುನಾವಣಾ ಪೂರ್ವ ಸಮೀಕ್ಷೆ !!

Jammu-Kashmir Assembly Election: 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಗಳು ನಡೆಯುತ್ತಿವೆ. ಅಂದರೆ ಬರೋಬ್ಬರಿ ಹತ್ತು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರ(Jammu-Kashmir) ವಿಧಾನಸಭೆ ಚುನಾವಣೆ(Assembly Election)ಗೆ ಸಜ್ಜಾಗಿದೆ. ಹೀಗಾಗಿ ಈಗ ನಡೆಯುತ್ತಿರುವ ಚುನಾವಣೆ ದೇಶದ ಗಮನ ಸೆಳೆದಿದೆ. ಈ ಬೆನ್ನಲ್ಲೇ ಇದೀಗ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದ್ದು, ಯಾರು ಈ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಚುಕ್ಕಾಣಿ ಹಿಡಿಯಬಹುದು ಎಂಬುದನ್ನು ಊಹಿಸಿದೆ.

 

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ತಮ್ಮದೇ ಆದ ಹಲವು ತಂತ್ರಗಾರಿಕೆಯನ್ನ ನಡೆಸಿವೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ರಾಜಕೀಯ ಪಕ್ಷಗಳು ತಮ್ಮ ತಮ್ಮ ಚುನಾವಣಾ ತಯಾರಿಯಲ್ಲಿ ನಿರತವಾಗಿವೆ. ಈ ನಡುವೆ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದೆ.

ಹೌದು, Election Tracker ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಲಿದೆ ಎನ್ನಲಾಗಿದೆ. ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ 45 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಇನ್ನು ಈ ಬಾರಿ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಸೆ.18, ಸೆ.25 ಮತ್ತುಅ.1ರಂದು ದಿನಾಂಕ ನಿಗದಿಪಡಿಸಲಾಗಿದೆ. ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲು ಇಸಿ ನಿರ್ಧರಿಸಿದೆ.

ತ್ರಿಕೋನ ಸ್ಪರ್ಧೆ:
ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮತ್ತು ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ ಬಿಜೆಪಿಗೆ ಈ ಸಲದ ಗೆಲುವು ತುಂಬಾ ಮಹತ್ವದ್ದು. ಯಾಕೆಂದರೆ ವಿಶೇಷ ಸ್ಥಾನಮಾನ ತೆಗೆದದ್ದು ಒಳಿತಾಯಿತೋ ಕೆಡುಕಾಯಿತೋ ಎಂಬುದನ್ನು ಇದು ಸಾಭೀತುಪಡಿಸುತ್ತದೆ.

Leave A Reply

Your email address will not be published.