Milk Price cut: ಅನ್ನದಾತನ ಮೇಲೆ ಬರೆ ಎಳೆದ ಕಾಂಗ್ರೆಸ್ ಸರಕಾರ: ಹಾಲಿನ ಖರೀದಿ ದರ ಕಡಿತ

Milk Price: ಹಾಲಿನ ಖರೀದಿ(Milk Purchase) ದರದಲ್ಲಿ 1.50 ರೂ. ಕಡಿತ(Price Cut)ಮಾಡಿರುವ ಸರ್ಕಾರದ ಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ(MP H D Kumaraswami) ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು(CM) ಕ್ರಮ ವಹಿಸಿ ಹಾಲು ಖರೀದಿ ದರಕ್ಕೆ ತಡೆ ಒಡ್ಡಬೇಕು ಎಂದು ಆಗ್ರಹಿಸಿದ್ದಾರೆ.

 

ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ(Congress govt) ಅನ್ನದಾತನ(Farmer) ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ, ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಸಚಿವರು ಕಟುವಾಗಿ ಟೀಕಿಸಿದ್ದಾರೆ.

ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ರೂ.೧.೫೦ ಕಡಿತ ಮಾಡಿವೆ. ಹೊಸ ಖರೀದಿ ದರ ರೂ. 30.50ರಿಂದ ರೂ.28ಕ್ಕೆ ಕುಸಿದಿದೆ. ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Leave A Reply

Your email address will not be published.