Weather Forecast: ಕರ್ನಾಟಕದ ಹವಾಮಾನ ಮುನ್ಸೂಚನೆ : ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?
Weather Forecast: ಇಂದು ಕಾಸರಗೋಡು(Kasaragodu) ಸೇರಿದಂತೆ ಕರ್ನಾಟಕದ ಕರಾವಳಿ(Karnataka Coastal) ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯಾಗುವ(Light rain) ಸಾಧ್ಯತೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು. ಸಣ್ಣ ಪ್ರಮಾಣದ ಗುಡುಗು(Thunder) ಇರುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಆಗಾಗ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ಮೇಲೆ, ಸಂಜೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಮುಂದಿನ 10 ದಿನಗಳವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಾತ್ರ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸೆಪ್ಟೆಂಬರ್ 8ರಿಂದ ಮುಂದಿನ 4 ದಿನಗಳ ಕಾಲ ಸ್ವಲ್ಪ ಜಾಸ್ತಿ ಇರಬಹುದು. ಮಲೆನಾಡು ಭಾಗಗಳಲ್ಲಿಯೂ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ.