Karnataka Politics: ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಸಿಎಂ ಪಟ್ಟಕ್ಕೆ ಏರೋರು ಇವರಂತೆ – ಡಿಕೆಶಿಗೆ ಮತ್ತೆ ಶಾಕ್ !!
Karnataka Politics: ರಾಜ್ಯದಲ್ಲಿ ಆಗುತ್ತಿರುವ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು(Karnataka Politics) ನೋಡಿದರೆ ಮುಡಾ ಹಗರಣ ಸಿಎಂ ಸಿದ್ದರಾಮಯ್ಯ(CM Siddaramaiah) ನವರಿಗೆ ಕುಣಿಕೆಯಾಗಿ ಪರಿಣಮಿಸುವುದು, ಅವರು ಮುಂದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಯಾಕೋ ಪಕ್ಕಾ ಅನಿಸುತ್ತಿದೆ. ಆದರೆ ಯಾವುದನ್ನೂ ನಿಖರವಾಗಿ ಹೇಳಲಾಗದು. ಒಂದು ವೇಳೆ ಹೀಗೇನಾದರೂ ಆಗಿ, ಸಿದ್ದರಾಮಯ್ಯ ಮುಖ್ಯಮಂತ್ರಿ(CM Post) ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಆ ಸ್ಥಾನಕ್ಕೇರುವ ನಾಯಕ ಯಾರು ಎಂಬ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಕೆಲವು ಅಚ್ಚರಿಯ ಬೆಳವಣಿಗೆಗಳು ಉತ್ತರ ನೀಡುವಂತಿವೆ.
ಹೌದು, ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ತೀವ್ರ ಊಹಾಪೋಹಗಳಿಗೆ ಕಾರಣವಾಗಿದೆ. ಮೂಡಾ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣದ ಆರೋಪದ ಮೇಲೆ ಸಿದ್ದರಾಮಯ್ಯ ಒಂದು ವೇಳೆ ರಾಜೀನಾಮೆ ನೀಡಿದರೆ ಆ ಸ್ಥಾನಕ್ಕೆ ಏರುವ ನಾಯಕ ಯಾರು ಎನ್ನುವ ಪ್ರಶ್ನೆ ಇದೀಗ ಎದ್ದಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಹಲವಾರು ನಾಯಕರು ಈಗಾಗಲೇ ತುದಿಗಾಲಲ್ಲಿ ನಿಂತಿದ್ದಾರೆ. ಕೆಲವು ನಾಯಕರು ತಾನು ಸಿಎಂ ಸ್ಥಾನದ ಆಕಾಂಕ್ಷಿ ಎನ್ನುವ ಹೇಳಿಕೆಯನ್ನು ಕೂಡಾ ಕೊಟ್ಟಾಗಿದೆ.
ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಎದುರಾದರೆ ಆ ಸ್ಥಾನವನ್ನು ಅಲಂಕರಿಸುವ ನಾಯಕನ ಹೆಸರು ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ. ಅದುವೇ ಈಗಿನ ಗೃಹ ಸಚಿವ ಪರಮೇಶ್ವರ್(Dr G Parameshwar)ಅವರ ಹೆಸರು. ಯಾಕೆಂದರೆ ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ನಡೆದ ಸಭೆ ನಡೆಸಿದ್ದಾರೆ. ಆದರೆ ಸಭೆಯಲ್ಲಿ ನಡೆದ ಮಾತುಕತೆ ಬಗ್ಗೆ ಪರಮೇಶ್ವರ್ ತುಟಿ ಬಿಚ್ಚಿಲ್ಲ !!
ಇಷ್ಟೇ ಅಲ್ಲದೆ ಪರಮೇಶ್ವರ್ ಮತ್ತು ಜಾರಕಿಹೊಳಿ ಅವರು ಇತ್ತೀಚೆಗೆ ಅತೃಪ್ತ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿರುವುದು ಕೂಡಾ ಗಮನಾರ್ಹ.ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ್ 2013ರಲ್ಲಿ ಅನಿರೀಕ್ಷಿತ ಸೋಲು ಕಂಡ ನಂತರ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿ ಹೋಯಿತು. ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದೇ ಬಹುವಾಗಿ ನಂಬಲಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯದ ಸ್ಥಿತಿಯಲ್ಲಿ ಡಿಫೆನ್ಸಿವ್ ಆಗಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪರಮೇಶ್ವರ್ ಗೆ ಈ ಅವಕಾಶ ಶೀಘ್ರದಲ್ಲೇ ಒದಗಿ ಬರಬಹುದು ಎನ್ನಲಾಗಿದೆ.
ಇನ್ನು ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikharjun Kharge) ಅವರನ್ನು ಆರಂಭದಲ್ಲಿ ಈ ಸ್ಥಾನಕ್ಕೆ ಪರಿಗಣಿಸಲಾಗಿತ್ತಾದರೂ, ಇತ್ತೀಚೆಗೆ ಅವರ ಕುಟುಂಬದವರು ನಿರ್ವಹಿಸುತ್ತಿರುವ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆಯಾಗಿದೆ ಎನ್ನುವ ವಿವಾದದ ಕರಿನೆರಳು ಖರ್ಗೆ ಮೇಲಿದೆ.ಎಂ.ಬಿ.ಪಾಟೀಲ್ ಗೂ ಭೂ ಸಂಬಂಧಿತ ಸಮಸ್ಯೆ ತಡೆಯಾಗಬಹುದು.ಸತೀಶ್ ಜಾರಕಿಹೊಳಿ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಗಂಭೀರವಾಗಿ ಪರಿಗಣಿಸದಿರುವುದಕ್ಕೆ ಜೆಡಿಎಸ್ ಜೊತೆಗಿನ ಹಿಸ್ಟರಿ ಕಾರಣ ಎನ್ನಲಾಗಿದೆ. ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಈ ಹುದ್ದೆಯನ್ನು ಅಲಂಕರಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ಆದರೆ ಅವರನ್ನು ಈ ಸ್ಥಾನಕ್ಕೆ ಪರಿಗಣಿಸುವುದು ಕಷ್ಟ ಎನ್ನಲಾಗಿದೆ. ಒಟ್ಟಿನಲ್ಲಿ ಪರಮೇಶ್ವರ್ ಅವರು ಈ ವಿಚಾರವಾಗಿ ತುಂಬಾ ಆಕ್ಟೀವ್ ಆಗಿರುವುದು ಕುತೂಹಲಕ್ಕೆ ಕಾರಣವಾಗಿದೆ.