Anna Bhagya: 5 ಕೆಜಿ ಹೆಚ್ಚುವರಿ ಅಕ್ಕಿ ಕೊಡಲ್ಲ, ಮೊದಲಿನಂತೆ ಹಣವನ್ನೇ ನೀಡುತ್ತೇವೆ – ಸರ್ಕಾರದಿಂದ ಮಹತ್ವದ ಘೋಷಣೆ !!

Anna Bhagya: ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿ‌ ಖರೀದಿ ಮಾಡದಿರಲು ರಾಜ್ಯ ಸರ್ಕಾರ ನಿರ್ಧಾರಿಸಿದ್ದು, ಜನರಿಗೆ 5 ಕೆಜಿ ಅಕ್ಕಿ ಬದಲಾಗಿ ಮೊದಲಿನಂತೆ ಹಣವನ್ನೇ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ರಾಜ್ಯ ಸರ್ಕಾರದ ಕಾಂಗ್ರೆಸ್ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನ ಭಾಗ್ಯ(Anna Bhagya) ಯೋಜನೆ ಅಡಿಯಲ್ಲಿ ಜನರಿಗೆ 5 ಕೆ.ಜಿ. ಅಕ್ಕಿ ಹಾಗೂ ಬಾಕಿ 5 ಕೆ.ಜಿ. ಅಕ್ಕಿಯ ಬದಲಾಗಿ ಹಣವನ್ನು ಕೊಡಲಾಗುತ್ತಿದೆ. ಆದರೆ, ಈಗ ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಗಳು ಅಕ್ಕಿ ಕೊಡುವಂತೆ ಮನವಿ ಮಾಡಿದರೆ ಕೊಡಲು ಸಿದ್ಧವೆಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಣದ ಬದಲಿಗೆ ಅಕ್ಕಿಯನ್ನೇ ನೀಡುವದಾಗಿ ರಾಜ್ಯದ ಜನರಿಗೆ ತಿಳಿಸಿತ್ತು. ಆದರೀಗ ಇದ್ದಕ್ಕಿದ್ದಂತೆ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಬದಲಿಸಿ ಮೊದಲಿನಂತೆ ಹಣವನ್ನೇ ಜನರಿಗೆ ನೀಡಲು ತೀರ್ಮಾನಿಸಲಾಗಿದೆ.

ಸಭೆಯ ಬಳಿಕ ಸಭೆಯ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಈ ವಿಚಾರವನ್ನೂ ಪ್ರಸ್ತಾಪಿಸಿದರು. ಈ ಬಗ್ಗೆ ಮಾತನಾಡಿದ ಅವರು ‘ಆಹಾರ ಇಲಾಖೆಯ ಪ್ರಾಸ್ತಾವನೆಯಂತೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮುಂದುವರಿಯಲಿದೆ. ಕೇಂದ್ರದಿಂದ ಅಕ್ಕಿ ಖರೀದಿಸುವ ಬದಲು, ನಾವು ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳಿಗೆ ಹಣ ಕೊಡುತ್ತಿದ್ದೇವೆ. ಈ ಹಣ ಇತರ ಸಾಮಗ್ರಿ ಖರೀದಿಗೆ ಜನರಿಗೆ ಅನುಕೂಲ ಆಗಲಿದೆ. ಹೀಗಾಗಿ ಅಕ್ಕಿ ಬದಲು ಡಿಬಿಟಿ ಮೂಲಕ ಹಣವನ್ನೇ ಸರ್ಕಾರ ವರ್ಗಾವಣೆ ಮಾಡಲಿದೆ ಎಂದರು.

Leave A Reply

Your email address will not be published.