Ganesh Chaturthi: ನಾಳೆ (ಸೆ.07) ಮಾಂಸ ಮಾರಾಟ ನಿಷೇಧ
Ganesh Chaturthi: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಈ ಕಾರಣದಿಂದ ಶನಿವಾರ (ಸೆ.07) ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ. ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ದಿನಾಂಕ: 07-09-2024ರ ಶನಿವಾರದಂದು "ಗಣೇಶ ಚತುರ್ಥಿ ಹಬ್ಬದ " ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.#meatprohibited pic.twitter.com/xBhwASXVnj
— Bruhat Bengaluru Mahanagara Palike (@Bbmpcares) September 4, 2024