Nithin Ghadkari: ಸದ್ಯದಲ್ಲೇ ಎಲೆಕ್ಟ್ರಿಕ್ ವಾಹನಗಳ ಬೆಲೆಯಲ್ಲಿ ಭರ್ಜರಿ ಏರಿಕೆ – ಸಚಿವ ನಿತಿನ್ ಗಡ್ಕರಿ ಘೋಷಣೆ !!

Nithin Ghadkari: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳು(ಇವಿ) ಕೊಳ್ಳುವಿಕೆ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಗ್ರಾಹಕರಿಗೆ ದೊಡ್ಡ ಆಘಾತ ಎದುರಾಗಿದೆ. ಹೌದು, ಎಲೆಕ್ಟ್ರಿಕ್ ವಾಹನಗಳ ಬೆಲೆಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆಯಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಯಸ್, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nithin Ghadkari) ಮಹತ್ವದ ಘೋಷಣೆ ಹೊರಡಿಸಿದ್ದು, ಬೇಡಿಕೆ ಹೆಚ್ಚಳ ಹಾಗೂ ಉತ್ಪಾದನಾ ವೆಚ್ಚ ತಗ್ಗಿರುವುದರಿಂದ ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಖರೀದಿಗೆ ನೀಡುವ ಸಬ್ಸಿಡಿ ಅಗತ್ಯವಿಲ್ಲ. ಆರಂಭಿಕ ವೆಚ್ಚ ಹೆಚ್ಚಾಗಿತ್ತು, ಆದರೆ ಬೇಡಿಕೆ ಹೆಚ್ಚಿದಂತೆ ಉತ್ಪಾದನಾ ವೆಚ್ಚ ಕಡಿಮೆಯಾಯಿತು ಹೀಗಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಳಿಕ ಮಾತನಾಡಿದ ಅವರು ‘ಎಲೆಕ್ಟ್ರಿಕ್ ವಾಹನ(EV)ಗಳಿಗೆ ಈಗಾಗಲೇ ಉತ್ತಮ ತೆರಿಗೆ ರಿಯಾಯಿತಿ ಇದೆ. ಇವುಗಳ ಮೇಲಿನ ಜಿಎಸ್‌ಟಿ ಕೇವಲ ಶೇ.5 ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಇದು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಅಲ್ಲದೆ ದೇಶದಲ್ಲಿ ಇನ್ನೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅವಲಂಬಿತವಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಆದರೂ ಈ ವಾಹನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಆಲೋಚನೆ ಸರ್ಕಾರಕ್ಕೆ ಇಲ್ಲ. ಪೆಟ್ರೋಲ್ ಡೀಸೆಲ್ ವಾಹನಗಳ ಅವಲಂಬನೆಯಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ ಮತ್ತು ಈ ಪ್ರಕ್ರಿಯೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಅಲ್ಲದೆ ಗ್ರಾಹಕರು ಈಗ ಎಲೆಕ್ಟ್ರಿಕ್ ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ವಾಹನಗಳನ್ನ ಸ್ವಂತವಾಗಿ ಆಯ್ಕೆ ಮಾಡುತ್ತಿದ್ದಾರೆ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ನಾವು ಹೆಚ್ಚಿನ ಸಬ್ಸಿಡಿ ನೀಡುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಅಭಿಪ್ರಾಯದಲ್ಲಿ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಇನ್ನು ಮುಂದೆ ಸರ್ಕಾರವು ಸಬ್ಸಿಡಿ ನೀಡುವ ಅಗತ್ಯವಿಲ್ಲ. ಸಬ್ಸಿಡಿಗಳನ್ನು ಕೇಳುವುದು ಇನ್ನು ಮುಂದೆ ಸಮರ್ಥನೀಯವಲ್ಲ” ಎಂದು ಅವರು ಹೇಳಿದರು.

Leave A Reply

Your email address will not be published.