Bengaluru: ಬೆಂಗಳೂರಿನಲ್ಲಿ ವೇಶ್ಯವಾಟಿಕೆ ದಂಧೆ – ಬೆಳ್ತಂಗಡಿ ವ್ಯಕ್ತಿ ಸೇರಿ ಮೂವರ ಬಂಧನ !!
Bengaluru: ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ಪಡೆದು ಶುಕ್ರವಾರ ಸಿಸಿಬಿ ಡಿಸಿಪಿ ಅಬ್ದುಲ್ ಅಹದ್ ಮಾರ್ಗದರ್ಶನದಲ್ಲಿ ಮಹಿಳಾ ಸಂರಕ್ಷಣಾ ದಳದ ಎಸಿಪಿ ಎಚ್.ಎನ್.ಧರ್ಮೇಂದ್ರ ನೇತೃತ್ವದ ತಂಡ ದಾಳಿ ನಡೆಸಿ ಬೆಳ್ತಂಗಡಿ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವಕನ ಸಹಿತ ಮೂವರನ್ನು ಬಂಧಿಸಿದ್ದಾರೆ.
ಮೂಲತಃ ಬೆಳ್ತಂಗಡಿ(Belthangady) ನಿವಾಸಿ, ಬೆಂಗಳೂರಿನಲ್ಲಿ ವಾಸವಾಗಿದ್ದ ಟೆಕ್ಕಿ ಸುಬ್ರಹ್ಮಣ್ಯ ಶಾಸ್ತ್ರಿ, ಬೆಂಗಳೂರಿನ ಹೊಂಗಸಂದ್ರದ ಕರಿಷ್ಮಾ ಶೇಖ್ (ಮುಸ್ಕಾನ್) (23) ಹಾಗೂ ಬೆಂಗಳೂರಿನ ಶಾಂತಿಪುರದ ಸೂರಜ್ ಸಾಹಜೀ(26) ಬಂಧಿತರೆಂದು ತಿಳಿದುಬಂದಿದೆ. ಕರಿಷ್ಮಾ ಹಾಗೂ ಸೂರಜ್ ಪಶ್ಚಿಮ ಬಂಗಾಳದವರಾಗಿದ್ದು, ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಉದ್ಯೋಗದ ನೆಪದಲ್ಲಿ ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಅದಕ್ಕಾಗಿ ಗೋವಿಂದಪುರದಲ್ಲಿ ಮನೆ ಬಾಡಿಗೆಗೆ ಪಡೆದು ದಂಧೆ ನಡೆಸುತ್ತಿದ್ದರು.
ಪೋಕ್ಸ್ ಪ್ರಕರಣ ದಾಖಲು:
ಆರೋಪಿಗಳಾದ ಕರಿಷ್ಮಾ ಹಾಗೂ ಸೂರಜ್ ಕೆಲ ದಿನಗಳ ಹಿಂದೆ ಬಾಂಗ್ಲಾ ದೇಶದ ಇಬ್ಬರು ಬಾಲಕಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಿದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿದ್ದು, ಈ ವೇಳೆ ಗ್ರಾಹಕ ಟೆಕ್ಕಿ ಕೂಡ ಸಿಕ್ಕಿಬಿದ್ದಿದ್ದ. ಆ ಮನೆಗೆ ಆತ ಎರಡನೆ ಬಾರಿ ಬಂದಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಇನ್ನು ಆರಂಭದಲ್ಲಿ ತಾವು ಪಶ್ಚಿಮ ಬಂಗಾಳ ರಾಜ್ಯದವರು ಎಂದು ಸಂತ್ರಸ್ತೆಯರು ಹೇಳಿದ್ದರು. ಇದಕ್ಕೆ ಪೂರಕವಾದ ಆಧಾರ್ ಸೇರಿ ಇತರೆ ದಾಖಲೆಗಳನ್ನು ನೀಡಿದರು. ಆದರೆ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದಾಗ ಆ ಬಾಲಕಿಯರು ಅಕ್ರಮ ಬಾಂಗ್ಲಾ ದೇಶದ ವಲಸಿಗರು ಎಂಬುದು ಖಚಿತವಾಗಿದೆ.