Govind Karjol: ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪೇನು?: ಗೋವಿಂದ ಕಾರಜೋಳ

Govind Karjol: ಶಾಲೆಗಳಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಶೌಚಾಲಯ ತೊಳೆಯುತ್ತಿರುವ ವೀಡಿಯೋ ವೈರಲ್‌ ಆಗಿ ಬಹಳ ವಿರೋಧ ವ್ಯಕ್ತವಾಗಿದ್ದವು. ಈ ಕುರಿತು ಚಿತ್ರದುರ್ಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು ಹೇಳಿಕೆಯೊಂದನ್ನು ನೀಡಿದ್ದು, ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯ ತೊಳೆದರೆ ತಪ್ಪೇನು? ಜಪಾನ್‌ನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶೌಚಾಳಯ ಸ್ವಚ್ಛಗೊಳಿಸುತ್ತಾರೆ ಎಂದು ಹೇಳಿರುವ ಕುರಿತು ಮಾಧ್ಯಮವು ಪ್ರಸಾರ ಮಾಡಿದೆ.

ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಈ ಮಾತನ್ನು ಹೇಳಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ನನ್ನ ವಸತಿ ನಿಲಯವನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳಿಂದ ಶಿಕ್ಷಕರು ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೋ ನಾನು ನೋಡುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಪೊರಕೆ ನೀಡುವುದು ಮಕ್ಕಳ ಕೈಯಲ್ಲಿ ಅಪರಾಧ ಎಂಬಂತೆ ಕಾಣುತ್ತಿದ್ದು, ಸ್ವಚ್ಛತೆಯ ಕೆಲಸ ಕೀಳು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿದೆ. ಅದಕ್ಕೆ ಬದಲಾಗಿ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ತಿಳಿ ಹೇಳುವುದು ಅವಶ್ಯ ಎಂದು ಹೇಳಿದರು.

ಕೆಲ ಎಚ್ಚರಿಕೆಗಳನ್ನು ಬಳಸಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು ತಪ್ಪೇನಿಲ್ಲ. ಯಾವುದೇ ತಾರತಮ್ಯವಿಲ್ಲದೇ ಎಲ್ಲಾ ವಿದ್ಯಾರ್ಥಿಗಳು ಸ್ವಚ್ಛತೆ ಮಾಡಬೇಕು. ಇದರಲ್ಲಿ ಶಿಕ್ಷಕರು, ಮುಖ್ಯ ಶಿಕ್ಷಕರು ಭಾಗಿಯಾಗಬೇಕು. ಕನಿಷ್ಟ 11 ವರ್ಷ, ಐದನೇ ತರಗತಿ ಹಾಗೂ ಅದಕ್ಕಿಂತ ಹೆಚ್ಚಿನ ತರಗತಿಯ ವಿದ್ಯಾರ್ಥಿಗಳು ಸ್ವಚ್ಛತೆ ಮಾಡಬೇಕು. ಶೌಚಾಲಯಗಳಲ್ಲಿ ನೀರು ಸೌಲಭ್ಯ ಹೊಂದಿರಬೇಕು ಎಂದು ಅವರು ಹೇಳಿದರು.

Leave A Reply

Your email address will not be published.