HD Kumaraswamy: ವಾಹನ ಸವಾರರಿಗೆ ಗುಡ್‌ನ್ಯೂಸ್: ಕೇಂದ್ರ ಸಚಿವ ಕುಮಾರಸ್ವಾಮಿ

HD Kumaraswamy: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಈ ಮಾಹಿತಿಯಿಂದ ಗ್ರಾಹಕರು ಕೊಂಚ ನಿರಾಳವಾಗಿದ್ದಾರೆ. ಹೌದು, ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗುವ ಸಬ್ಸಿಡಿಯನ್ನು ಇನ್ನೂ ಒಂದೆರಡು ತಿಂಗಳು ವಿಸ್ತರಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.
ಸದ್ಯ ಎಲೆಕ್ಟ್ರಿಕ್ ವಾಹನಗಳಿಗೆ ನೀಡುವ ಸಬ್ಸಿಡಿಯನ್ನು ಇನ್ನೂ ಒಂದೆರಡು ತಿಂಗಳ ಕಾಲ ಮುಂದುವರೆಸುವುದಾಗಿ ಮತ್ತು ಅದರೊಂದಿಗೆ, ಈ ತಿಂಗಳು ಕೊನೆ ಗೊಳ್ಳಬೇಕಿದ್ದ ಸಬ್ಸಿಡಿ ಯೋಜನೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಮುಖ್ಯವಾಗಿ ಎಲೆಕ್ಟ್ರಿಕ್ ಸ್ಕೂಟರ್, ಎಲೆಕ್ಟ್ರಿಕ್ ಆಟೋ ಹಾಗೂ ಎಲೆಕ್ಟ್ರಿಕ್ ವಾಣಿಜ್ಯ ಆಟೋಗಳಿಗೆ ಕೇಂದ್ರ ಸರ್ಕಾರ ಕ್ರಮವಾಗಿ 10,000 ರು., 25,000 ರು. ಹಾಗೂ 50,000 ರು. ಸಬ್ಸಿಡಿ ನೀಡುತ್ತದೆ. ಇದಕ್ಕಾಗಿ ಇಎಂಪಿಎಸ್ ಎಂಬ ಯೋಜನೆ ಜಾರಿಯಲ್ಲಿದೆ. ಅದು ಸೆ.30ಕ್ಕೆ ಅಂತ್ಯಗೊಳ್ಳಬೇಕಿತ್ತು. ಆದರೆ ಅದನ್ನು ಫೇಮ್ 3 ಯೋಜನೆ ಅಂತಿಮಗೊಂಡು ಜಾರಿಗೆ ಬರುವವರೆಗೆ ಮುಂದುವರೆಸಲಾಗುವುದು. ಬಹುತೇಕ ಒಂದೆರಡು ತಿಂಗಳ ಕಾಲ ಮುಂದುವರೆಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.