Amith Shah: ದೇಶದಲ್ಲಿ ಮೀಸಲಾತಿ ಇನ್ನು ಎಷ್ಟು ಸಮಯ ಇರುತ್ತದೆ? ಅಮಿತ್ ಶಾ ಹೊಸ ಸ್ಪಷ್ಟನೆ !!

Amith Shah: ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮೀಸಲಾತಿ ರದ್ದತಿ ವಿಚಾರ ಆಗಾಗ ಚರ್ಚೆಯಾಗುತ್ತಿತ್ತು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂಬ ಗುಸುಗುಸು ಕೇಳಿಬಂದಿತ್ತು. ನಡುವೆ ತಣ್ಣಗಾಗಿದ್ದ ಈ ವಿಚಾರ ಇದೀಗ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amith Shah) ಸ್ಪಷ್ಟೀಕರಣ ನೀಡಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಳೆದ ಕೆಲವು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ಹಲವಾರು ಟೀಕೆಗಳನ್ನು ಮಾಡಿದ್ದರಿಂದ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ(BJP) ಎಂದಿಗೂ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ. ನಮಗೆ ಈಗ ಬಹುಮತವಿದ್ದು, ಮೀಸಲಾತಿ ವಿಚಾರದಲ್ಲಿ ತಲೆಕೆಡಿಸಿಕೊಂಡಿಲ್ಲ. ಈಗ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ ಮತ್ತು ತ್ರಿವಳಿ ತಲಾಖ್(Trivali Talaq) ಕೊನೆಗೊಳಿಸಿದ್ದೇವೆ ಆದರೆ ಮೀಸಲಾತಿಯನ್ನು ರದ್ದುಗೊಳಿಸಲಿಲ್ಲ. ಮೀಸಲಾತಿ(Reservation) ಎಂದಿಗೂ ಶಾಶ್ವತವಾದದ್ದು ಅದನ್ನು ಎಂದೂ ತೆಗೆಯಲ್ಲ, ಕಾಂಗ್ರೆಸ್ ಗೂ ತೆಗೆಯಲು ಬಿಡುವುದಿಲ್ಲ’ ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನು ಅಮೇರಿಕಾದ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ‘ಮೀಸಲಾತಿ ಮತ್ತು ಈ ಮೀಸಲಾತಿ ಎಲ್ಲಿಯವರೆಗೆ ಮುಂದುವರಿಯುತ್ತದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ‘ಭಾರತವು ನ್ಯಾಯಯುತವಾದ ಸ್ಥಳವಾದಾಗ ನಾವು ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಯೋಚಿಸುತ್ತೇವೆ. ಭಾರತವು ನ್ಯಾಯಯುತ ಸ್ಥಳವಲ್ಲ’ ಎಂದು ಹೇಳಿದ್ದರು. ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ‘ದೇಶದಲ್ಲಿ ಮೀಸಲಾತಿ ರದ್ದುಪಡಿಸುವ ಬಗ್ಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದ್ದಾರೆ. ಅವರ ಮನಸ್ಸಿನಲ್ಲಿದ್ದ ಆಲೋಚನೆಗಳು ಅಂತಿಮವಾಗಿ ಪದಗಳಾಗಿ ಹೊರಹೊಮ್ಮಿವೆ ಅಮಿತ್ ಶಾ ಹೇಳಿದರು. ಬಿಜೆಪಿ ಇರುವವರೆಗೂ ಯಾರೂ ಮೀಸಲಾತಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಅಥವಾ ರಾಷ್ಟ್ರದ ಭದ್ರತೆಗೆ ಯಾರೂ ಸಮಸ್ಯೆ ನೀಡಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ’ ಎಂದು ಹೇಳಿದ್ದಾರೆ

Leave A Reply

Your email address will not be published.