students viral video: ಬರ್ತ್ ಡೇ ನೆಪದಲ್ಲಿ ಶಾಲೆಯಲ್ಲಿ ಹೈಸ್ಕೂಲ್‌ ಹುಡುಗೀರ ಎಣ್ಣೆ ಪಾರ್ಟಿ! ವಿಡಿಯೋ ವೈರಲ್

Students viral video: ಈಗಿನ ಮಕ್ಕಳು ತಮ್ಮ ವಯಸ್ಸಿಗೆ ಮೀರಿದ ವರ್ತನೆ ಮತ್ತು ಅಭ್ಯಾಸ ಮಾಡಿಕೊಳ್ಳುತ್ತಾರೆ ಅನ್ನೋದಕ್ಕೆ ಇದೇ ಸಾಕ್ಷಿಯಾಗಿದೆ. ಹೌದು, ಇಲ್ಲೊಂದು ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಸಹಪಾಠಿಯ ಹುಟ್ಟುಹಬ್ಬದ ನೆಪದಲ್ಲಿ ಶಾಲಾ ಕೊಠಡಿಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ (Students viral video) ಆಗಿದೆ.

 

ಈ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಮಸ್ತೂರಿ ಪ್ರದೇಶದ ಭಚೌರಾ ಗ್ರಾಮದ ಸರ್ಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ನಡೆದಿದ್ದು, ಈ ಪಾರ್ಟಿಯ ವಿಡಿಯೋವನ್ನು ವಿದ್ಯಾರ್ಥಿನಿಯೊಬ್ಬಳು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಕುರಿತ ಪೋಸ್ಟ್‌ ಒಂದನ್ನು ಸೂರ್ಯ ಪ್ರಕಾಶ್‌ ಸೂರ್ಯಕಾಂತ್‌ (SPsuryakant) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ದಲ್ಲಿ ಕೆಲವು ವಿದ್ಯಾರ್ಥಿನಿಯರು ಶಾಲಾ ಕೊಠಡಿಯೊಳಗೆ ಬಿಯರ್‌ ಸೇವಿಸಿ ಬರ್ತ್‌ಡೇ ಪಾರ್ಟಿ ಮಾಡಿರುವ ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

https://x.com/SPsuryakant/status/1833309417632084431

ಸದ್ಯ ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಬಿಲಾಸ್‌ಪುರದ ಜಿಲ್ಲಾ ಶಿಕ್ಷಣಾಧಿಕಾರಿ ಟಿ.ಆರ್‌ ಸಾಹು ಮೂವರು ಸದಸ್ಯರ ಸಮಿತಿ ಸಂಬಂಧಪಟ್ಟ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಮೋಜಿಗಾಗಿ ಬಿಯರ್‌ ಬಾಟಲಿಗಳನ್ನು ಹಿಡಿದು ವಿಡಿಯೋ ಮಾಡಿದ್ದು, ಆದ್ರೆ ನಾವು ಬಿಯರ್‌ ಸೇವಿಸಿಲ್ಲ ಎಂದು ವಿದ್ಯಾರ್ಥಿನಿಯರು ತನಿಖಾ ತಂಡಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.