School Bus: 3 ವರ್ಷದ ಬಾಲಕಿ ತಲೆ ಮೇಲೆ ಶಾಲಾ ವಾಹನ ಹರಿದು ಭೀಕರ ಮರಣ!

School Bus: 3 ವರ್ಷದ ಬಾಲಕಿ ತಲೆ ಮೇಲೆ ಶಾಲಾ ವಾಹನ (School Bus) ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

 

ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ ಶಾಲಾ ವಾಹನದಲ್ಲಿ ಅಣ್ಣ ಬಂದಿದ್ದ ವೇಳೆ ತಂದೆಯ ಹಿಂದೆ ಖುಷಿ ಹೋಗಿದ್ದಳು. ಆದರೆ ತಂದೆ ಮಗಳು ಬಂದಿರುವುದನ್ನು ನೋಡಿರಲಿಲ್ಲ. ಇನ್ನೇನು ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಖುಷಿ ಬಸ್‌ ಚಕ್ರದಡಿ ಬಿದ್ದು, ಆಕೆಯ ತಲೆ ಮೇಲೆ ಶಾಲಾ ಬಸ್ ಹರಿದಿದೆ. ಘಟನೆಯ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇದೀಗ ಶಾಲಾ ವಾಹನ ಚಾಲಕ ಶ್ರೀಶೈಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave A Reply

Your email address will not be published.