Accident: ಮತ್ತೊಂದು ‘ಹಿಟ್ ಅ್ಯಂಡ್ ರನ್’ ಕೇಸ್: ಮೂವರು ಯುವಕರು ಸಾವು!

Accident: ಇತ್ತೀಚಿಗೆ ‘ಹಿಟ್ ಅ್ಯಂಡ್ ರನ್’ ಕೇಸ್ ಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಅಪಘಾತದಲ್ಲಿ (Accident)ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರನ್ನು ಹರ್ಷ (22), ರೋಹಿತ್​​ (22), ಸುಚಿತ್ (22), ಎಂದು ಗುರುತು ಪತ್ತೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave A Reply

Your email address will not be published.