CM Siddaramaiah: 10 ವರ್ಷಗಳ ಮೋದಿ ಆಡಳಿತದಲ್ಲಿ ಭಾರತ ಮಾಡಿದ ಸಾಲವೆಷ್ಟು ?! ಸಿಎಂ ಸಿದ್ದರಾಮಯ್ಯ ಕೊಟ್ಟ ಲೆಕ್ಕವಿದು
CM Siddaramaiah: ಸಾಲದ ಸುಳಿಗೆ ಸಿಲುಕಿ ಶ್ರೀಲಂಕಾ, ಪಾಕಿಸ್ತಾನ ದಿವಾಳಿಯಾದ ಬಗ್ಗೆ ನಾವು ಕೇಳಿದ್ದೇವೆ, ನೋಡಿದ್ದೇವೆ. ಈ ಬಳಿಕ ಭಾರತ ಮಾಡಿರೋ ವಿದೇಶಿ ಸಾಲದ ಬಗ್ಗೆಯೂ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶದ ಸಾಲ ಹೆಚ್ಚಾಗಿದೆ ಅನ್ನೋ ಟೀಕೆಯನ್ನ ವಿರೋಧ ಪಕ್ಷಗಳು ಮಾಡುತ್ತಿವೆ. ಅದರಲ್ಲೂ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಆಗಾಗ ಈ ಲೆಕ್ಕ ನೀಡುತ್ತಿರುತ್ತಾರೆ. ಅಂತೆಯೇ ಇದೀಗ ಮತ್ತೆ ಅವರು ಮೋದಿ ಮಾಡಿರೋ ಸಾಲದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಹೌದು, ಮೋದಿಯವರ(PM Modi) 10 ವರ್ಷದ ಅವಧಿಯಲ್ಲಿ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಲ್ಲದೆ ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.