PM Modi: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೆಯಲ್ಲಿ ಮೋದಿ ಗಣೇಶ ಹಬ್ಬ ಆಚರಣೆ- ಪ್ರತಿಪಕ್ಷಗಳ ಟೀಕೆ!!
PM Modi : ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್(CJI Chandrachud) ಅವರ ಮನೆಗೆ ಗಣೇಶ ಪೂಜೆಗಾಗಿ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಭೇಟಿ ನೀಡಿದ್ದ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಪ್ರತಿಪಕ್ಷಗಳು ಟೀಕೆ ಮಾಡುತ್ತಾ ಇದನ್ನು ವಿರೋಧಿಸಿವೆ.
ಹೌದು, ಇಡೀ ದೇಶವೇ 10 ದಿನಗಳ ಗಣಪತಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದೆ. ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಗಣೇಶ ಪೂಜೆಯನ್ನು ಆಯೋಜಿಸಲಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಗಣಪತಿಗೆ ಆರತಿ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಪ್ರದಾಯಿಕ ಮರಾಠಿ ಬಿಳಿ ಟೋಪಿ ಧರಿಸಿ ಕಾಣಿಸಿಕೊಂಡರು.
ವಿಪಕ್ಷಗಳ, ವಕೀಲರ ಟೀಕೆ:
ಇದನ್ನು ಖಂಡಿಸಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, ‘ಸಿಜೆಐ ನಿವಾಸಕ್ಕೆ ಪ್ರಧಾನಿ ಅವರ ಖಾಸಗಿ ಭೇಟಿಗೆ ಅವಕಾಶ ಮಾಡಿಕೊಟ್ಟಿರುವುದು ನಿಜಕ್ಕೂ ಆಘಾತಕಾರಿಯಾಗಿದ್ದು, ಕೆಟ್ಟ ಸಂದೇಶವನ್ನು ರವಾನಿಸುತ್ತದೆ’ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಪ್ರಶಾಂತ್ ಭೂಷಣ್, ‘ಇದು ಕಾರ್ಯಾಂಗದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ’ ಎಂದು ಹೇಳಿದ್ದಾರೆ.
ಶಿವಸೇನೆಯ ನಾಯಕ, ರಾಜ್ಯಸಭಾ ಸಂಸದ ಸಂಜಯ್ ರಾವುತ್ ಅವರು ಮೋದಿ ಭೇಟಿಯನ್ನು ಟೀಕಿಸಿದರು. ಇಂತಹ ಭೇಟಿಗಳು ಅನುಮಾನಗಳನ್ನು ಹುಟ್ಟುಹಾಕುತ್ತವೆ. ಶಿವಸೇನೆ ಯುಬಿಟಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವಿನ ಜಗಳಕ್ಕೆ ಸಂಬಂಧಿಸಿದ ಪ್ರಕರಣದಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳು ಹಿಂದೆ ಸರಿಯಬೇಕು ಎಂದು ಅವರು ಸಲಹೆ ನೀಡಿದರು. “ನೋಡಿ, ಇದು ಗಣಪತಿ ಹಬ್ಬ. ಪ್ರಧಾನಿ ಇದುವರೆಗೆ ಎಷ್ಟು ಜನರ ಮನೆಗೆ ಭೇಟಿ ನೀಡಿದ್ದಾರೆ? ನನಗೆ ಮಾಹಿತಿ ಇಲ್ಲ. ದೆಹಲಿಯಲ್ಲಿ ಹಲವೆಡೆ ಗಣೇಶ ಹಬ್ಬ ಆಚರಿಸಲಾಗುತ್ತದೆ, ಆದರೆ ಪ್ರಧಾನಿ ಮುಖ್ಯ ನ್ಯಾಯಮೂರ್ತಿಗಳ ಮನೆಗೆ ಹೋದರು, ಮತ್ತು ಪ್ರಧಾನಮಂತ್ರಿ ಮತ್ತು ಮುಖ್ಯ ನ್ಯಾಯಾಧೀಶರು ಒಟ್ಟಾಗಿ ಆರತಿಯನ್ನು ಮಾಡಿದರು, ಸಂವಿಧಾನದ ಪಾಲಕರು ಈ ರೀತಿಯಲ್ಲಿ ರಾಜಕೀಯ ನಾಯಕರನ್ನು ಭೇಟಿ ಮಾಡಿದರೆ, ಜನರು ಅನುಮಾನಿಸುತ್ತಾರೆ, “ಎಂದು ರಾವುತ್ ಟೀಕಿಸಿದರು.
https://x.com/ANI/status/1833896701817676038?t=5y6rYjONFNWZ77KNS32c8w&s=08