Railway employee: ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು! ಅಷ್ಟಕ್ಕೂ ಕಾರಣ ಏನು ಗೊತ್ತಾ?

Railway employee: ರೈಲ್ವೇ ಸಿಬ್ಬಂದಿಯನ್ನು  (Railway employee) ಹಲವು ಪ್ರಯಾಣಿಕರು ಸೇರಿ ಹೊಡೆದು ಕೊಂದ ಘಟನೆ ಇದೀಗ ಬೆಳಕಿಗೆ ಬಂದಿದೆ.

 

ಮಾಹಿತಿ ಪ್ರಕಾರ ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ರಾತ್ರಿ 11.30ರ ಹೊತ್ತಿಗೆ ಬಾಲಕಿಯ ತಾಯಿ ವಾಶ್ ರೂಂಗೆ ಹೋದ ವೇಳೆ ರೈಲಿನ ಸಿಬ್ಬಂದಿ ಬಾಲಕಿಯೊಂದಿಗೆ ತಪ್ಪಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಇತರೆ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಲ್ಲಿ ಹಲವು ಗಂಟೆಗಳ ಕಾಲ ಆತನಿಗೆ ಮನಬಂದಂತೆ ಹೊಡೆದಿದ್ದಾರೆ. ಪ್ರಯಾಣಿಕರ ಹಿಗ್ಗಾ ಮುಗ್ಗ ಹೊಡೆತದಿಂದ ಸಿಬ್ಬಂದಿ ಅತಿಯಾದ ರಕ್ತ ಸ್ರವ ಮತ್ತು ಬಲವಾದ ಪೆಟ್ಟಿನಿಂದ ಮರಣ ಹೊಂದಿದ್ದಾನೆ.

ಮಾಹಿತಿ ಪ್ರಕಾರ ಬಿಹಾರದ ಸಿವಾನ್‌ನ ಕುಟುಂಬವೊಂದು ಹಮ್ಸಫರ್ ಎಕ್ಸ್‌ಪ್ರೆಸ್ ಮೂರನೇ ಎಸಿ ಕೋಚ್‌ನಲ್ಲಿ ಬುಧವಾರ ಪ್ರಯಾಣಿಸುತ್ತಿರುವ ವೇಳೆ, ಅದೇ ಕೋಚ್‌ನಲ್ಲಿ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಪ್ರಯಾಣಿಸುತ್ತಿದ್ದ. ಆ ಕುಟುಂಬದ 11 ವರ್ಷದ ಬಾಲಕಿಯನ್ನು ಈತ ತನ್ನ ಸೀಟಿನಲ್ಲಿ ಕೂರಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ರಾತ್ರಿ 11.30ಕ್ಕೆ ಬಾಲಕಿಯ ತಾಯಿ ವಾಶ್ ರೂಂಗೆ ಹೋದಾಗ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕುಟುಂಬಸ್ಥರು ಹಾಗೂ ಇತರೆ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಲ್ಲಿ ಹಲವು ಗಂಟೆಗಳ ಕಾಲ ಆತನನ್ನು ಮನಬಂದಂತೆ ಥಳಿಸಿದ್ದಾರೆ.

ಮರುದಿನ ರೈಲು ಗುರುವಾರ ಬೆಳಿಗ್ಗೆ 4.30 ರ ಸುಮಾರಿಗೆ ಉತ್ತರ ಪ್ರದೇಶದ ಕಾನ್ಪುರ ಕೇಂದ್ರ ನಿಲ್ದಾಣವನ್ನು ತಲುಪಿದ್ದು, ಪ್ರಯಾಣಿಕರು ಸರ್ಕಾರಿ ರೈಲ್ವೆ ಪೊಲೀಸರಿಗೆ ಪ್ರಶಾಂತ್ ಕುಮಾರ್ ನನ್ನು ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕೂಡಲೇ ರೈಲ್ವೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave A Reply

Your email address will not be published.