Arvind Kejriwal: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ!

Arvind Kejriwal: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಭಾನುವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

 

ಅರವಿಂದ್ ಕೇಜ್ರಿವಾಲ್ ದೆಹಲಿ ಅಬಕಾರಿ ಪ್ರಕರಣದಲ್ಲಿ ಜಾಮೀನು ಪಡೆದು ಆರು ತಿಂಗಳ ನಂತರ ತಿಹಾರ್ ಜೈಲಿನಿಂದ ಹೊರಬಂದ ಎರಡೇ ದಿನಗಳಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಧಾನ ಕಚೇರಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವಾಗ ಅವರು ತಮ್ಮ ನಿರ್ಧಾರ ಅವರು ಘೋಷಿಸಿದ್ದಾರೆ.

“ಜೈಲಿನಿಂದ ಹೊರ ಬಂದ ನಂತರ ಅಗ್ನಿಪರೀಕ್ಷೆಗೆ ಒಳಗಾಗಲು ನಾನು ಬಯಸುತ್ತೇನೆ. ನಾವು ಪ್ರಾಮಾಣಿಕರು ಎಂದು ಜನರು ಹೇಳಿದಾಗ ಮಾತ್ರ ನಾನು ಮುಖ್ಯಮಂತ್ರಿ ಮತ್ತು ಸಿಸೋಡಿಯಾ ಅವರು ಉಪ ಮುಖ್ಯಮಂತ್ರಿಯಾಗುತ್ತಾರೆ” ಎಂದು ಅವರು ಹೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.