Nagmangal: ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ನೀತಿ , ಮುಸಲ್ಮಾನರಿಗೆ ಇನ್ನೊಂದು ನೀತಿ: ರವಿಕುಮಾರ್

Nagmangal: ನಾಗಮಂಗಲದಲ್ಲಿ ಹಿಂದೂ ಮತ್ತು ಮುಸಲ್ಮಾನರಿಗೆ ಬೇರೆ ಬೇರೆ ನೀತಿ! ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ? ಎಂದು ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನೆ ಮಾಡಿದ್ದಾರೆ.

 

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ರವಿಕುಮಾರ್ ಅವರು, ರಾಜ್ಯ ಸರಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‍ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ರಚಿಸುತ್ತಿದೆ, ಕರ್ನಾಟಕದಲ್ಲಿ ಸಂವಿಧಾನವನ್ನು ಜಾರಿ ಮಾಡುತ್ತಿದ್ದೀರಾ? ಎಂದು ಕೇಳಿದರು.

ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಸಂವಿಧಾನ ಯಥಾವತ್ ಜಾರಿಗೊಳಿಸುವ ಸರಕಾರ ಎಂದು ಕಾಂಗ್ರೆಸ್ಸಿಗರು ಹೇಳಿಕೊಳ್ಳುತ್ತಾರೆ. ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಅಟ್ರಾಸಿಟಿ ಕೇಸ್ ಆಗಿದ್ದು, ಬಂಧಿಸಿದ್ದೀರ ಒ.ಕೆ. ಆದರೆ, ಒಂದು ತಿಂಗಳಿಗೂ ಹಿಂದೆ ಇದೇ ಅಟ್ರಾಸಿಟಿ ಕೇಸ್ ಕಾಂಗ್ರೆಸ್ಸಿನ ಶಾಸಕ ಚನ್ನಾರೆಡ್ಡಿ ಮೇಲೂ ಆಗಿದೆ. ಎಲ್ಲ ಕಾರ್ಯಕ್ರಮಗಳಲ್ಲಿ ರಾಜಾರೋಷವಾಗಿ ಭಾಗವಹಿಸುವ ಅವರನ್ನು ಇನ್ನೂ ಬಂಧಿಸಿಲ್ಲ. ಇದಾ ನಿಮ್ಮ ಪ್ರಜಾಪ್ರಭುತ್ವ? ಇದಾ ನಿಮ್ಮ ಸೆಕ್ಯುಲರಿಸಂ, ಇದಾ ನಿಮ್ಮ ಸಂವಿಧಾನ ಮಾನ್ಯ ಸಿದ್ದರಾಮಯ್ಯನವರೇ ಎಂದು ಪ್ರಶ್ನೆ ಮಾಡಿದ್ದಾರೆ.

ಅದಲ್ಲದೆ ನಾಗಮಂಗಲದಲ್ಲಿ (Nagmangal) ಗಣಪತಿ ಹಬ್ಬ ಮಾಡುವ, ಮೆರವಣಿಗೆ ಹೋಗುವ ಹಿಂದೂ ಯುವಕರ ಮೇಲೆ ಕಲ್ಲು ಎಸೆದುದಲ್ಲದೆ, ಗಣಪತಿ ಮೂರ್ತಿ ಮೇಲೆ ಚಪ್ಪಲಿ ಎಸೆದಿದ್ದಾರೆ. ಹಿಂದೂಗಳ ಮೇಲೆ ಲಾಠಿಚಾರ್ಜ್, ಕಲ್ಲೆಸೆತ ಆಗಿದೆ. ಹಿಂದೂಗಳ ಹತ್ತಾರು ಅಂಗಡಿ ಸುಟ್ಟಿದ್ದಾರೆ. ಆದರೆ, ಹಿಂದೂಗಳನ್ನೇ ಪ್ರಮುಖ ಆರೋಪಿಗಳನ್ನಾಗಿ ಮಾಡಿ (ಎ1, ಎ2, ಎ3 ಹೀಗೆ) ಕೇಸು ಹಾಕಿದ್ದಾರೆ ಎಂದು ಆಕ್ಷೇಪಿಸಿದರು.

ಗಲಭೆಯಲ್ಲಿ ಅಂಗಡಿ ಸುಟ್ಟವರು, ಚಪ್ಪಲಿ, ಕಲ್ಲು ಎಸೆದವರನ್ನು ಕೇಸಿನಲ್ಲಿ ಸೇರಿಸಿಲ್ಲ. ಇದು ರಾಜ್ಯದ ಪ್ರಜಾಪ್ರಭುತ್ವವೇ ಎಂದು ಕೇಳಿದರು.ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ ಸೃಷ್ಟಿ ಆಗಿದೆ ಎಂದಿದ್ದಾರೆ.

Leave A Reply

Your email address will not be published.