Muruga Sharanaru: ಲೈಂಗಿಕ ದೌರ್ಜನ್ಯ ಪ್ರಕರಣ – ಜೈಲಲ್ಲಿರುವ ಮುರುಘಾ ಶರಣರಿಗೆ ಮತ್ತೆ ಆಘಾತ !!
Muruga Sharanaru: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಸದ್ಯ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ(Muruga Sharanaru) ತೀವ್ರ ಆಘಾತವಾಗಿದೆ.
ಹೌದು, ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ಭಾಗವನ್ನು ತೆಗೆದುಹಾಕಲು ನಿರ್ದೇಶಿಸಬೇಕು’ ಎಂದು ಕೋರಿದ್ದ ಪ್ರಕರಣದ ಆರೋಪಿಯೂ ಆದ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುರುಘಾ ಶರಣರಿಗೆ ದೊಡ್ಡ ಅಘಾತ ಎದುರಾಗಿದೆ.
ಅಂದಹಾಗೆ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು(Shivamurthy Muruga Sharanaru) ಕೆಲ ತಿಂಗಳ ಹಿಂದಷ್ಟೇ ಹೈಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೀಗ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು ಹೈಕೋರ್ಟ್(High Court) ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್(Supreme Court) ರದ್ದು ಮಾಡಿತ್ತು. ಹೀಗಾಗಿ ಮುರುಘಾ ಶ್ರೀಗಳು ಮತ್ತೆ ಜೈಲು ಪಾಲಾಗಿದ್ದರು.
ಪ್ರಕರಣದ ಹಿನ್ನೆಲೆ:
ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆ.26ರಂದು ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಶ್ರೀಗಳನ್ನು ಅದೇ ವರ್ಷ ಸೆ.1ರಂದು ಚಿತ್ರದುರ್ಗದ ಮಠದಲ್ಲಿ ಅರೆಸ್ಟ್ ಮಾಡಿದ್ದರು. ಸದ್ಯ ಈ ಕೇಸ್ ಕುರಿತಂತೆ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.