Delhi : ಕೇಜ್ರಿವಾಲ್ ರಾಜಿನಾಮೆ – ಯಾರಾಗ್ತಾರೆ ದೆಹಲಿಯ ಹೊಸ ಸಿಎಂ?!

Delhi : ಹಗರಣವೊಂದರಲ್ಲಿ ಸಿಲುಕಿ, ಬಂಧನಕ್ಕೊಳಗಾಗಿ 6 ತಿಂಗಳ ಬಳಿಕ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ್ದಾರೆ. ಅರವಿಂದ್ ಕೇಜ್ರಿವಾಲ್(Arvind Kejriwal)ಮಂಗಳವಾರ ರಾಜೀನಾಮೆ ನೀಡುವುದು ಖಚಿತ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಹಾಗದರೆ ದೆಹಲಿಯ(Delhi) ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಕುತೂಹಲ ಜನರಲ್ಲಿ ಶುರುವಾಗಿದೆ.

ಮಂಗಳವಾರ ಬೆಳಗ್ಗೆ 11.30ಕ್ಕೆ ಆಪ್ ಶಾಸಕರ ಸಭೆ ನಡೆಯಲಿದೆ ಎಂದು ಎಎಪಿ​ ತಿಳಿಸಿದೆ. ಇದರಲ್ಲಿ ನೂತನ ಮುಖ್ಯಮಂತ್ರಿ ಹೆಸರು ಚರ್ಚೆಯಾಗಲಿದೆ. ಇದಾದ ನಂತರ, ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಸಂಜೆ 4.30ಕ್ಕೆ ಲೆಫ್ಟಿನೆಂಟ್​ ಜನರಲ್​ಗೆ ರಾಜೀನಾಮೆ ಸಲ್ಲಿಸಬಹುದು ಮತ್ತು ಸಿಎಂ ಆಗಿ ಶಾಸಕಾಂಗ ಪಕ್ಷದ ಹೊಸ ನಾಯಕನ ಹೆಸರನ್ನು ಪ್ರಸ್ತಾಪಿಸಬಹುದು ಎಂದು ತಿಳಿದು ಬಂದಿದೆ.

ಅಂದಹಾಗೆ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕೇಜ್ರಿವಾಲ್‌, 48 ಗಂಟೆಗಳ ಒಳಗೆ ರಾಜೀನಾಮೆ ನೀಡುವುದಾಗಿ ಭಾನುವಾರ ಹೇಳಿದ್ದರು. ದೆಹಲಿಯಲ್ಲಿ ಶೀಘ್ರ ಚುನಾವಣೆ ನಡೆಸಬೇಕು, ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಮಾಡಿದ್ದರು.

Leave A Reply

Your email address will not be published.