HSRP Number Plate: HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಣೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

HSRP Number Plate: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP Number Plate) ಅಳವಡಿಸದ ವಾಹನ ಸವಾರರಿಗೆ ಮತ್ತೊಂದು ಅವಕಾಶ ನೀಡಲಾಗಿದೆ.

 

ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ HSRP ನಂಬರ್ ಪ್ಲೇಟ್ (High Security Registration Number Plate) ಕಡ್ಡಾಯ ಮಾಡಲಾಗಿದ್ದು, ಇದೀಗ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ಗಡುವನ್ನು ನೀಡಲಾಗಿದೆ. ಹೌದು, ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಏಪ್ರಿಲ್ 1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದ್ದು, ಈ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಈ ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.

ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದ್ದು, ಇದರಿಂದ ವಾಹನ ಸವಾರರಿಗೆ ಮತ್ತೊಂದು ಅವಕಾಶ ದೊರೆತಿದೆ.

Leave A Reply

Your email address will not be published.