Weather forcaste: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ?
Weather forcaste: ಕರಾವಳಿ : ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ(Karnataka) ಕರಾವಳಿ ಜಿಲ್ಲೆಗಳಲ್ಲಿ(Coastal) ಬಿಸಿಲು ಹಾಗೂ ಅಲ್ಲಲ್ಲಿ ಮೋಡದ(Cloudy) ವಾತಾವರಣದ ಮುನ್ಸೂಚನೆ ಇದೆ. ಮಳೆಯ(Rain) ಸಾಧ್ಯತೆ ಕಡಿಮೆಯಾಗಿದೆ.
ಈಗಿನಂತೆ ಸೆಪ್ಟೆಂಬರ್ 22ರ ವರೆಗೂ ಬಿಸಿಲು ಹಾಗೂ ಮೋಡದ ವಾತಾವರಣ ಇರುವ ಲಕ್ಷಣಗಳಿದ್ದು, ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಸ್ವಲ್ಪ ಮೋಡ ಹಾಗೂ ಶಿವಮೊಗ್ಗದ ಒಂದೆರಡು ಕಡೆ ತುಂತುರು ಮಳೆ ಇರಬಹುದು. ಈಗಿನಂತೆ ಸೆಪ್ಟೆಂಬರ್ 23ರ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡು ಹಾಗೂ ಸೆಪ್ಟೆಂಬರ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.