Muniratna: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್, ಮುನಿರತ್ನ ಏ1 ಆರೋಪಿ
Muniratna: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ಬಿದ್ದಿದೆ.
ಬೆಂಗಳೂರು ಹೊರವಲಯದ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಮುನಿರತ್ನ ಅಲ್ಲಿ ಏ1 ಆರೋಪಿ. ಬೆಂಗಳೂರಿನ ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ಬರೆಯಲಾಗಿದೆ.
ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜಾತಿನಿಂದನೆ ಕೇಸ್ ಭವಿಷ್ಯ ಇಂದು!
ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ ಅಂದರೆ ಇಂದಿಗೆ ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಅವರಿಗೆ ಜೈಲಾಗುತ್ತಾ, ಜಾಮೀನು ಸಿಗುತ್ತಾ ಎಂಬುದು ಇಂದು ನಿರ್ಧಾರವಾಗಲಿದೆ.