Jameer Ahamed: ‘ಪ್ಯಾಲಿಸ್ತೇನ್ ಧ್ವಜ ಹಿಡಿದು ಓಡಾಡಿದ್ರೆ, ಘೋಷಣೆ ಕೂಗಿದ್ರೆ ತಪ್ಪೇನ್ರೀ? ಅದು ತಪ್ಪಲ್ಲ ಕಣ್ರೀ..’ – ಸಚಿವ ಜಮೀರ್ ಶಾಕಿಂಗ್ ಸ್ಟೇಟ್ಮೆಂಟ್

Jameer Ahmed ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಕೆಲವು ಯುವಕರು ಪ್ಯಾಲಿಸ್ತೇನ್ ಧ್ವಜ(Palestinian Flag) ಹಿಡುದು ಮೆರವಣಿಗೆ ಮಾಡಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿ ಭಾರೀ ಸಂಚಲನ ಸೃಷ್ಟಿಸಿದ್ದರು. ಅನೇಕರು ಇದನ್ನು ಖಂಡಿಸಿದ್ದರು. ಆದರೀಗ ಸಚಿವ ಜಮೀರ್ ಅಹ್ಮದ್ ಖಾನ್(Jameer Ahamed)ಅವರು ಪ್ಯಾಲಿಸ್ತೇನ್ ಧ್ವಜ ಹಿಡಿದರೆ ಯಾವ ತಪ್ಪೂ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಹೌದು, ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕೆಲ ಮುಸ್ಲಿಂ ಯುವಕರು ಓಡಾಟ ನಡೆಸಿದ್ದ ಬಗ್ಗೆ ವರದಿಯಾಗಿತ್ತು. ಅದೇ ರೀತಿ ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದರು. ಚಿತ್ರದುರ್ಗದಲ್ಲಿಯೂ ಈದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿತ್ತು. ಪ್ಯಾಲೆಸ್ತೀನ್ ಧ್ವಜ ಹಿಡಿಯುವುದನ್ನು ಸಚಿವ ಜಮೀರ್ ಅಹ್ಮದ್​ ಖಾನ್ ಸಮರ್ಥನೆ ಮಾಡಿದ್ದು ಹೀಗೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು ಪ್ಯಾಲೆಸ್ತೀನ್‌ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ‘ವಿ ಆರ್ ವಿತ್ ಪ್ಯಾಲೆಸ್ತೀನ್’ ಅಂದಿದೆ. ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದು. ಧ್ವಜ ಹಿಡಿದಿದರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದರು.

ಇಷ್ಟೇ ಅಲ್ಲದೆ ಬೇರೆ ದೇಶದ ಪರ ಘೋಷಣೆ ಕೂಗಬಾರದು. ಘೋಷಣೆ ಕೂಗಿದರೆ ಅಂಥವರು ದೇಶದ್ರೋಹಿ ಕೆಲಸ ಮಾಡಿದಂತೆ ಆಗುತ್ತದೆ. ಘೋಷಣೆ ಕೂಗಿದವರು ಯಾರೇ ಇರಲಿ ಗಲ್ಲು ಶಿಕ್ಷೆಯಾಗಬೇಕು. ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಕನ್ನಡಿಗ. ಅದಾದಮೇಲೆ ಮುಸ್ಲಿಂ. ಯಾರೇ ಆದರೂ ಬೇರೆ ದೇಶದ ಪರ ಘೋಷಣೆ ಕೂಗಬಾರದು ಎಂದು ತಿಳಿಸಿದರು.

Leave A Reply

Your email address will not be published.