Menstrual Leave in Karnataka: ಕರ್ನಾಟಕ ಸರಕಾರ ಮಹಿಳಾ ಉದ್ಯೋಗಿಗಳಿಗೆ ನೀಡಲಿದೆ ವೇತನ ಸಹಿತ ಮುಟ್ಟಿನ ರಜೆ

Menstrual Leave in Karnataka: ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಲು ಮುಂದಾಗಿದೆ. ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ ಸರಕಾರ ನಿರ್ಧಾರ ಮಾಡಿದೆ.

 

ಡಾ.ಸಪ್ನಾ ಮುಖರ್ಜಿ ನೇತೃತ್ವದ ತಂಡ ಸರಕಾರಕ್ಕೆ ವರದಿ ರಚಿಸಿ ನೀಡಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ, ಅನುಮೋದನೆಗಾಗಿ ಶಾಸಕಾಂಗದ ಮುಂದೆ ಪ್ರಸ್ತಾಪನೆ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್‌ ಮೊಹ್ಸಿನ್‌ ತಿಳಿಸಿರುವುದಾಗಿ ವರದಿಯಾಗಿದೆ.

ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀಡುವ ಕುರಿತು ಕರ್ನಾಟಕ ಸರಕಾರ ಚಿಂತನೆ ಮಾಡಿದೆ.

Leave A Reply

Your email address will not be published.