Muniratna: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದ ಮುನಿರತ್ನ! ಜೈಲಿಂದ ಹೊರಬಂದ ಅರೆಕ್ಷಣದಲ್ಲಿ ಮತ್ತೆ ಅರೆಸ್ಟ್!

Muniratna: ಈಗಾಗಲೇ ಜಾತಿನಿಂದನೆ ಪ್ರಕರಣದ ಹಿನ್ನಲೆ ಅರೆಸ್ಟ್ ಆಗಿದ್ದ ಶಾಸಕ ಮುನಿರತ್ನ (Muniratna) ಜಾಮೀನು ಪಡೆದುಕೊಂಡು ಜೈಲಿನಿಂದ ಹೊರ ಬರುವಷ್ಟರಲ್ಲಿ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.

 

ಹೌದು, ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು (ಶುಕ್ರವಾರ) ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು (kaggalipura Police) ಇಂದು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ರನ್ನು ಪೊಲೀಸರು ತನಿಖೆ ನಡೆಸಲಿದ್ದಾರೆ.
ಮಾಹಿತಿ ಪ್ರಕಾರ, ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿದೆ.
ಈಗಾಗಲೇ ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ದೂರಿನ ಅನ್ವಯ ಪೊಲೀಸರು Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಿಸಿದ್ದರು. ಅದರಂತೆ ಆರೋಪಿ ಸ್ಥಾನದಲ್ಲಿ ಮುನಿರತ್ನ ನಾಯ್ಡು (ಎ1), ವಿಜಯ್‌ ಕುಮಾರ್‌ (ಎ2), ಸುಧಾಕರ (ಎ3), ಕಿರಣ್‌ ಕುಮಾರ್‌ (ಎ4), ಲೋಹಿತ್‌ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು ಎಂದು ತಿಳಿದು ಬಂದಿದೆ.

Leave A Reply

Your email address will not be published.