Jagan Mohan Reddy: ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು ಬಳಕೆ ಆರೋಪ – ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಫಸ್ಟ್ ರಿಯಾಕ್ಷನ್

Jagan Mohan Reddy: ಹಿಂದೂ ಧರ್ಮದ ಜನರ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ತಿರುಪತಿ ವೆಂಕಟೇಶ್ವರ ದೇವಸ್ಥಾನದ ಪ್ರಸಾದದಲ್ಲಿ ಜಗನ್ ಮೋಹನ್ ರೆಡ್ಡಿ(Jagan Mohan Reddy) ಆಡಳಿತದ ಅವಧಿಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ತನಿಖಾ ವರದಿಯಲ್ಲೂ ಇದು ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷೆ ಮಾಡಲು ಸಮಿತಿಯೊಂದನ್ನು ಟಿಟಿಡಿ ಸ್ಥಾಪಿಸಿದೆ. ಈ ಬೆನ್ನಲ್ಲೇ ಈ ವಿವಾದಕ್ಕೆ ಸಂಬಂಧಿಸಿದಂತೆ ಜಗನ್ ಮೋಹನ್ ರೆಡ್ಡಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿದೆ ಅನ್ನೋ ವಿಚಾರ ಬಾಲಾಜಿಯ ಕೋಟ್ಯಂತರ ಭಕ್ತರಿಗೆ ಆಘಾತ ತಂದಿದೆ. ಈ ವಿಚಾರದಲ್ಲಿ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಆಪಾದನೆ ಮಾಡಿದ್ದಾರೆ. ಧಾರ್ಮಿಕ ವಿಚಾರಗಳನ್ನು ರಾಜಕೀಯಕ್ಕೆ ಬಳಸಬೇಡಿ ಎಂದು ನಾಯ್ಡು ಅವರನ್ನು ಜಗನ್ ರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಲ್ಲದೆ ನಾಯ್ಡು ಅವರು ಈ ವಿಷಯದ ಬಗ್ಗೆ “ಸತ್ಯಗಳನ್ನು ಹೇಗೆ ತಿರುಚಿದ್ದಾರೆ” ಎಂಬುದನ್ನು ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆಯುವುದಾಗಿ ಮಾಜಿ ಸಿಎಂ ಜಗನ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ ಪ್ರಕರಣ!
ಇದೀಗ ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಅನ್ನೋ ವಿಚಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಈ ವಿಚಾರದಲ್ಲಿ ಸಂವಿಧಾನದ ಆರ್ಟಿಕಲ್ 25 ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆಪಾದನೆ ಮಾಡಲಾಗಿದೆ. ಈ ಆರ್ಟಿಕಲ್ ಅಡಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಉಲ್ಲಂಘನೆಯಾಗಿದೆ ಎಂದು ವಾದಿಸಲಾಗಿದೆ. ಇನ್ನು ಈ ಕುರಿತಾಗಿ ಆರೋಗ್ಯ ಸಚಿವಾಲಯ ಕೂಡಾ ಸಮಗ್ರ ವರದಿ ಕೇಳಿದೆ. ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಕೂಡಾ ಈ ಕುರಿತಾಗಿ ತನಿಖೆ ನಡೆಸಲು ಆಗ್ರಹಿಸಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

Leave A Reply

Your email address will not be published.