Dinesh Gundu Rao: ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ಆದೇಶ: ದಿನೇಶ್ ಗುಂಡೂರಾವ್
Dinesh Gundu Rao: ರಾಜ್ಯದಲ್ಲಿ ತುಪ್ಪ (Ghee) ಉತ್ಪಾದನೆ ಗುಣಮಟ್ಟ ಬಗ್ಗೆ ರಾಜ್ಯದಲ್ಲೂ ಗೊಂದಲ ಶುರುವಾಗಿದೆ. ಅದಕ್ಕಾಗಿ ತುಪ್ಪದ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ (Health Department) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆದೇಶ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯ ಸಚಿವರು, ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ನಿರ್ಧರಿಸಲಾಗಿದೆ. ತುಪ್ಪದ ಗುಣಮಟ್ಟ ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ತುಪ್ಪದ ಸ್ಯಾಂಪಲ್ ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ ಆದ ರೀತಿ ಕೊಬ್ಬಿನ ಅಂಶಗಳು ರಾಜ್ಯದಲ್ಲಿ ಕೂಡಾ ಬಳಕೆಯಾಗುತ್ತಿದೆಯೇ ಎಂದು ಪರಿಶೀಲನೆ ಆಗಲಿದೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಂಶ ಇತ್ತು ಎಂದು ಹೇಳಿರುವುದು ಆತಂಕಕಾರಿಯಾದ ವಿಚಾರವಾಗಿದೆ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ತಿರುಪತಿ ಲಡ್ಡು (Tirupati Laddu Row) ವಿಚಾರದಲ್ಲಿ ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತಹ ಪರಿಸ್ಥಿತಿ ಹೋಗಬಹುದು. ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ. ಮೊದಲು ವರದಿ ಬರಲಿ ಬಳಿಕ ಮುಂದಿನ ಕ್ರಮ ತೀರ್ಮಾನ ಮಾಡಲಿದ್ದೇವೆ ಎಂದಿದ್ದಾರೆ.
Daftar Resmi Sekarang Juga situs slot gacor Terpercaya
Daftar Resmi Sekarang Juga slot gacor Terpercaya
Daftar Resmi Sekarang Juga situs toto Terpercaya