Mysore: ಈ ಸಲ ದಸರಾ ಜಂಬೂಸವಾರಿ ಮಾರ್ಗ ಬದಲಾವಣೆ – ಸಚಿವ ಡಾ.ಎಚ್.ಸಿ. ಮಹದೇವಪ್ಪ !!

Share the Article

Mysore: ಈ ಬಾರಿ ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ(Dr HC Mahadevappa) ತಿಳಿಸಿದ್ದಾರೆ.

ಹೌದು, ದಸರಾ ಮಹೋತ್ಸವಕ್ಕೆ ಮೈಸೂರಿಗೆ(Mysore)ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ಇದರಿಂದ ಆಸನಗಳ ಸಮಸ್ಯೆ ಆಗುತ್ತಿದೆ. ಈ ಬಾರಿ ಅರಮನೆಯಲ್ಲಿ ಜಂಬೂಸವಾರಿ ಮಾರ್ಗ ಬದಲಾವಣೆ ಮಾಡಲು ನಿರ್ಧರಿಸಿದ್ದು, 10 ರಿಂದ 15 ಸಾವಿರ ಆಸನಗಳು ಹೆಚ್ಚಾಗಲಿವೆ. ಅರಮನೆ ಆವರಣದಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಕೆಲವು ಮಾರ್ಪಾಡು ಮಾಡಲು ನಿರ್ಧರಿಸಿದ್ದು, ಸುಮಾರು 500 ಮೀಟರ್ ಹೆಚ್ಚಾಗಲಿದೆ. ಇದರಿಂದ ಆಸನಗಳ ಸಂಖ್ಯೆಯೂ ಹೆಚ್ಚಾಗಲಿದ್ದು, ಅರಮನೆ ಆವರಣದಲ್ಲಿ 35 ರಿಂದ 40 ಸಾವಿರ ಆಸನಗಳ ವ್ಯವಸ್ಥೆ ಮಾಡಬಹುದಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರು ಅರಮನೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಷದಿಂದ ವರ್ಷಕ್ಕೆ ದಸರಾಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಟಿಕೆಟ್, ಪಾಸ್ ತೆಗೆದುಕೊಂಡವರು ಆಸನ ಸಿಗದೆ ಸಮಸ್ಯೆ ಎದುರಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಅರಮನೆಯಲ್ಲಿ ಆಸನಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು.

Leave A Reply

Your email address will not be published.