DK Shivkumar: ಮುಡಾ ಹಗರಣ ಕುರಿತು ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಜಾ- ಡಿ ಕೆ ಶಿವಕುಮಾರ್ ಹೇಳಿದ್ದಿಷ್ಟು

Share the Article

D K Shivkumar: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಕೇಳಿ ಬಂದಿದ್ದ ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ತನಿಖೆಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್(DK Shivkumar) ಅವರು ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.

ಹೌದು, ನಾನಿನ್ನು, ಕೊರ್ಟ್ ಆದೇಶ ಪ್ರತಿ ನೋಡಿಲ್ಲ. ಆದೇಶದ ಪ್ರತಿ ನೋಡಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಇದರಿಂದ ಹೊರಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಮೊದಲು ಹೈಕೋರ್ಟ್ ತೀರ್ಪು ಏನಿದೆ ಎಂದು ತಿಳಿದುಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಮೇಲೆ, ಕುಟುಂಬದ ಮೇಲೆ ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್ ಆಗಿ ಹೊರಬರ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆ ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

ಅಂದಹಾಗೆ ‘ರಾಜ್ಯಪಾಲರು ನೀಡಿರುವ ಆದೇಶ ಸರಿಯಾಗಿದೆ. ಯಾವುದೇ ಖಾಸಗಿ ವ್ಯಕ್ತಿ ಸಿಎಂ ವಿರುದ್ದ ತನಿಖೆಗೆ ಕೋರಲು ಅವಕಾಶವಿದೆ’ ಎನ್ನುವ ಮೂಲಕ ಹೈಕೋರ್ಟ್‌ ದೂರುದಾರರ ಮನವಿಗಳನ್ನು ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಕರ್ನಾಟಕದಲ್ಲಿ ಆಗುವ ಸಾಧ್ಯತೆಗಳಿವೆ

Leave A Reply

Your email address will not be published.