CM Siddaramaiah: ಮೂಡಾ ಹಗರಣ: ಸಿಎಂ ಅರ್ಜಿ ವಜಾಗೊಳಿಸಿದ ಹೈಕೋರ್ಟ್

HC Verdict on CM Siddaramaiah: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಿದೆ.

ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅರ್ಜಿ ವಜಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಸದ್ಯ ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ (CM siddaramaiah) ಬಗೆಗಿನ ತೀರ್ಪು ಬಂದಿದೆ .

ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ ಅರ್ಜಿ ವಜಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ್ದು, ಈ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್‌ ಸಿಗ್ನಲ್‌ ನೀಡಿದಂತಾಗಿದೆ.

ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದು, ರಾಜ್ಯಪಾಲರ ಕ್ರಮ ಸರಿಯಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್‌ ಹೇಳಿದೆ.

ಪ್ರಕರಣದ ವಿವರ:  ಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) 14 ಸೈಟುಗಳನ್ನು ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಖಾಸಗಿ ವ್ಯಕ್ತಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ಥಾವರ ಚಂದ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ. ಆದರೆ, ಪ್ರಾಸಿಕ್ಯೂಷನ್ ಎದುರಿಸದೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಮೇಲ್ಮನವಿ ಹೋಗಿದ್ದರು.

ಇದೀಗ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯ ಆದೇಶ ಹೊರಬೀಳುವವರೆಗೂ ಕೆಳ ಹಂತದ ಯಾವುದೇ ನ್ಯಾಯಾಲಯಗಳು  ಯಾವುದೇ ತೀರ್ಪು ಅಥವಾ ಆದೇಶ ನೀಡದಂತೆ ಹೈಕೋರ್ಟ್‌ನಿಂದ ತಡೆ ಒಡ್ಡಲಾಗಿತ್ತು. ಇದೀಗ ಆದೇಶ ಹೊರ ಬಿದ್ದ ಬೆನ್ನಲ್ಲಿಯೇ ಕೆಳ ಹಂತದ ಕೋರ್ಟ್‌ಗಳಲ್ಲಿ ಪ್ರಾಸಿಕ್ಯೂಷನ್ ವಿಚಾರಣೆ ನಡೆಯಲಿದೆ. ಸದ್ಯ ಸಿಎಂ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲಿಯೇ ಮುಡಾ ಹಗರಣದ ತನಿಖೆ ಮುಂದುವರೆಯಲಿದೆ.

Leave A Reply

Your email address will not be published.