MUDA Scam: ಮುಡಾ ಹಗರಣದ ಕುರಿತ ಹೈಕೋರ್ಟ್ ತೀರ್ಪು: ಸತ್ಯಕ್ಕೆ ಸಂದ ಜಯ – ಆರ್ ಅಶೋಕ್

Share the Article

MUDA Scam: ಘನತೆವೆತ್ತ ರಾಜ್ಯಪಾಲರು(Governor) ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ(Prosecution) ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್(High court) ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್(R Ashok) ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ @INCKarnataka ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ.

Leave A Reply

Your email address will not be published.