Siddaramaiah: ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಒಂದು ವೇಳೆ ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ?!: ಛಲವಾದಿ

Siddaramaiah: ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ಇಂದು ವಜಾಗೊಳಿಸಿದೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮ ಜೊತೆಗೆ, ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ಮಾತನಾಡಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಒಂದು ವೇಳೆ ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ ಎಂದು ಹೇಳಿದ್ದಾರೆ.

 

ಹೌದು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡದಿದ್ದರೆ ರಾಜ್ಯದಲ್ಲಿ ಮಾತ್ರವಲ್ಲ. ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡ್ತೀವಿ ಅಂತ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ಹೇಳಿದ್ದಾರೆ.

ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನ್ನೋದು ಕೋರ್ಟ್‌ ಇಂದಿನ ಆದೇಶದಿಂದ ಸ್ಪಷ್ಟವಾಗಿದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಅನ್ನೋದು ಸಹ ಇದರಿಂದ ಜನ ಅರ್ಥ ಮಾಡಿಕೊಂಡಿದ್ದಾರೆ. ಕಾನೂನನ್ನು ಮುರಿಯುವವರಿಗೆ, ವಿರೋಧಿಸುವವರಿಗೆ ನ್ಯಾಯ ಸಿಗ್ಲಲ ಅನ್ನೋದನ್ನ ಹೈಕೋರ್ಟ್‌ ಆದೇಶ ಎತ್ತಿಹಿಡಿದಿದೆ. ಅದಲ್ಲದೆ ಈಗಾಗಲೇ ಸಿದ್ದರಾಮಯ್ಯ ಅವರು 2 ಬಾರಿ ಡಿಸಿಎಂ ಆಗಿದ್ದವರು, ವಿಪಕ್ಷ ನಾಯಕರಾಗಿದ್ದವರು. 2ನೇ ಬಾರಿಗೆ ಮುಖ್ಯಮಂತ್ರಿ ಸಹ ಆಗಿದ್ದಾರೆ. ಅವರು ತಮ್ಮದೇ ಅಲ್ಲದ ಮುಡಾದ ಭೂಮಿಗೆ ಪರಿಹಾರ ಕೇಳಿದ್ದು ತಪ್ಪು ಎಂದರು.

ಸಿದ್ದರಾಮಯ್ಯ ನವರೇ ನಿಮ್ಮ ಹೈಕಮಾಂಡ್‌ ಸಪೋರ್ಟ್‌ ನಿಮಗಿದ್ದರೆ, ಸಿಎಂ ಮಾಡಬಹುದು ಅಷ್ಟೇ. ನ್ಯಾಯಾಲಯದಿಂದ ಪಾರು ಮಾಡೋಕೆ ಆಗಲ್ಲ. ಅವರಿಗೆ ನ್ಯಾಯಾಲಯ, ವ್ಯವಸ್ಥೆ, ಅಂಬೇಡ್ಕರ್‌, ಸಂವಿಧಾನದ ಬಗ್ಗೆ ಗೌರವ ಇದ್ದರೇ ರಾಜೀನಾಮೆ ಕೊಟ್ಟೇ ಕೊಡ್ತಾರೆ ಎಂದು ನುಡಿದರು.

Leave A Reply

Your email address will not be published.