CM siddaramaiah: ಅಂಗನವಾಡಿ ಉದ್ಯೋಗಕ್ಕೆ ಉರ್ದು ಕಡ್ಡಾಯ! ಕಾಂಗ್ರೆಸ್ ನ ಮುಸ್ಲಿಂ ಓಲೈಕೆಗೆ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

CM siddaramaiah: ಸಿಎಂ ಸಿದ್ದರಾಮಯ್ಯ (CM siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಂಗನವಾಡಿ ಶಿಕ್ಷಕರಿಗೆ ಉರ್ದುವನ್ನು ಕಡ್ಡಾಯವಾಗಿ ತಿಳಿದಿರುವ ಭಾಷೆಯನ್ನಾಗಿ ಮಾಡುವ ಮೂಲಕ ಹೊಸ ವಿವಾದಕ್ಕೆ ದಾರಿ ಮಾಡಿದೆ.

ಸರ್ಕಾರದ ಉರ್ದು ಕಡ್ಡಾಯ ಅಧಿಸೂಚನೆಯ ಕುರಿತು ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ‘ಮುಸ್ಲಿಮರ ಓಲೈಕೆ’ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಇದೀಗ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದೆ.

ಎಕ್ಸ್​​ನಲ್ಲಿ ಪೋಸ್ಟ್​ ನಲ್ಲಿ ರಾಜ್ಯ ಬಿಜೆಪಿಯು, ಸಿಎಂ ಸಿದ್ದರಾಮಯ್ಯ ಸರ್ಕಾರ ಕನ್ನಡ ನಾಡಿನಲ್ಲಿ ಉರ್ದು ಹೇರಿಕೆ ಮಾಡುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಅಂಗನವಾಡಿ ಶಿಕ್ಷಕರ ಹುದ್ದೆಗೆ ನೇಮಕಗೊಳ್ಳಲು ಉರ್ದು ಕಡ್ಡಾಯವಾಗಿ ಬರಬೇಕಂತೆ. ಹೀಗೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದೆ ಎಂದು ಕಿಡಿ ಕಾರಿದ್ದಾರೆ.

https://x.com/SivaHarsha_23/status/1810921020770992371

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಅಂಗನವಾಡಿ ಶಿಕ್ಷಕರ ಹುದ್ದೆಗೆ ನೇಮಕಗೊಳ್ಳಲು ಉರ್ದು ಕಡ್ಡಾಯವಾಗಿ ಬರಬೇಕಂತೆ, ಹೀಗೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರೇ, ಮೂಡಿಗೆರೆ ಇರುವುದು ಕರ್ನಾಟಕದಲ್ಲಿ, ಕರ್ನಾಟಕದಲ್ಲಿ ಕನ್ನಡ ಅಧಿಕೃತ ಭಾಷೆ, ಅಂತಹದರಲ್ಲಿ ಉರ್ದು ಕಡ್ಡಾಯ ಏಕೆ ಎಂದು ಉತ್ತರಿಸಿ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಬಿಜೆಪಿ ಮುಖಂಡ ನಳೀನ್​ ಕುಮಾರ್​ ಕೂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅಂಗನವಾಡಿ ಶಿಕ್ಷಕರ ನೇಮಕಾತಿಯಲ್ಲಿಯೂ ಮುಸ್ಲಿಂ ಸಮುದಾಯವನ್ನು ಒಲೈಸುವ, ಅವರಿಗೆ ಮಾತ್ರ ಕೆಲಸ ಸಿಗುವಂತೆ ದಾರಿ ಮಾಡಿಕೊಡುವ ಕಳ್ಳ ಯತ್ನ ಮತ್ತೊಮ್ಮೆ ಕಾಂಗ್ರೆಸ್ಸಿಗರ ನೀಚ ನೀತಿ ಎತ್ತಿ ತೋರಿಸುತ್ತಿದೆ ಎಂದು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ.

Leave A Reply

Your email address will not be published.