Rain in Karnataka: ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ: ವಿಜಯಪುರ, ಬೆಳಗಾವಿ, ಕಲಬುರಗಿ ಸಹಿತ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Rain in Karnataka: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು, ಸೆಪ್ಟಂಬರ್‌ 25, ಬುಧವಾರವೂ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. (Rain Alert at Karnataka karavali and many districts) ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ, ಉಡುಪಿ ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗಲಿದ್ದು, ಮೂರೂ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಮಳೆ ಜತೆಗೆ ಗಾಳಿಯ ವೇಗವೂ ಅಧಿಕವಾಗಿ ಇರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.

ಉಳಿದಂತೆ ರಾಜ್ಯದ ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ ಹಾಗೂ ಮಲೆನಾಡು ಭಾಗದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗ ತಿಳಿಸಿದೆ. ಆಗಾಗಿ ಈ ಆರೂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನಿನ್ನೆ ಮಂಗಳವಾರ ಕರಾವಳಿಯ ಹಲವು ಕಡೆಗಳಲ್ಲಿ ಜೋರಾಗಿ ಮಳೆಯಾಗಿದೆ. ರಾತ್ರಿಯ ವೇಳೆ ಮಳೆ ಜೋರಾಗಿತ್ತು. ಅಲ್ಲದೆ ಬೆಂಗಳೂರಿನಲ್ಲೂ ಬುಧವಾರ ಸಾಧಾರಣ ಮಳೆಯಾಗಬಹುದು.

ಒಂಬತ್ತು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಇನ್ನು ಕರ್ನಾಟಕದ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ನಾಳೆ ಬುಧವಾರ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ ಸುರಿಯುವ ಸಾಧ್ಯತೆಗಳು ದಟ್ಟವಾಗಿವೆ ಎನ್ನುವ ಮುನ್ಸೂಚನೆ ನೀಡಲಾಗಿದೆ. ಹಾಗಾಗಿ ಈ ಮೂರು ಜಿಲ್ಲೆಗಳಲ್ಲೂ ಆರೆಂಜ್‌ ಅಲರ್ಟ್‌ ಇರಲಿದೆ.

ಜತೆಗೆ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಗುಡುಗು ಸಹಿತ ಮಳೆ ಇರಲಿದೆ. ಗುಡುಗು ಮಿಂಚಿಗೆ ಮಳೆಯ ಸಾಥ್ ಇರಲಿದ್ದು ಗಾಳಿಯ ವೇಗವೂ ಅತಿಯಾಗಿ ಇರಲಿದೆ, ಅಲ್ಲದೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗಲಿದೆ. ಅಲ್ಲೂ ಗಾಳಿ ವೇಗ ಹೆಚ್ಚು ಇರಲಿದೆ. ಈ ಆರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌’ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.

ಉಳಿದಂತೆ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಈದ್ದೂ ವೇಗವಾದ ಗಾಳಿಯ ಜತೆ ಮಳೆ ಜತೆಗೂಡಿ ಬರಲಿದೆ. ಇನ್ನು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆ ಬೀಳಬಹುದು. ಆದ್ರೆಗುರುವಾರದಿಂದ ಬಹುತೇಕ ಕಡೆಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಯಿದೆ. ಆದರೆ ಸಾಧಾರಣ ಮಳೆ ಮುಂದಿನ ಐದು ದಿನಗಳ ಕಾಲ ಇರಲಿದೆ.

Leave A Reply

Your email address will not be published.