Narendra Modi: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಧಾನಿ ಮೋದಿ ಒತ್ತಾಯ!

Narendra Modi: ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರು ಇಂದು ರಿಯಾಕ್ಷನ್ ಮಾಡಿದ್ದಾರೆ.

 

ಹೌದು, ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರ ಸೋನಿಪತ್‌ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಮುಡಾ ವಿಚಾರ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ.

ಮೋದಿ ಅವರು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ (Haryana Poll Rally) ಮಾತನಾಡಿ, ಹೈಕಮಾಂಡ್‌ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಕೊಳ್ಳೆ ಹೊಡೆಯಲು ಪರವಾನಿಗೆ ನೀಡಿದಂತಾಗಲಿದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Government Of Karnataka) ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ,  ಶೀಘ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಲೇಬೇಕು. ಕೊನೆಯದಾಗಿ ಹೀಗೆ ಭ್ರಷ್ಟಾಚಾರ ಮಾಡಿದವರಿಗೆ ಹರಿಯಾಣದಲ್ಲಿ ಅವಕಾಶ ಕೊಡ್ತಿರಾ? ಎಂದು ಮೋದಿ ಪ್ರಶ್ನಿಸಿದ್ದಾರೆ.

Leave A Reply

Your email address will not be published.