Santosh Hegde: ಮುಡಾ ಹಗರಣ ಸಂಕಷ್ಟ- ಸಿಎಂ ಸಿದ್ದರಾಮಯ್ಯ ಮುಂದೇನು ಮಾಡಬೇಕುಂದು ಟಿಪ್ಸ್ ನೀಡಿದ ಸಂತೋಷ್ ಹೆಗ್ಡೆ !!

Santosh Hegde: ಮುಡಾ ಹಗರಣ ಸಿದ್ದರಾಮಯ್ಯ ಕುಣಿಕೆಯನ್ನು ಇನ್ನಷ್ಟು ಗಟ್ಟಿಯಾಗಿ ಬಿಗಿಯೋದು ಫಿಕ್ಸ್ ಆಗಿದೆ. ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅನುಮತಿ ನೀಡಿ, ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ (Karnataka High Court) ಎತ್ತಿಹಿಡಿದಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯನ ಮುಂದಿನ ನಡೆ ಏನು ಎಂಬುದು ಕುತೂಹಲವಾಗಿದೆ.

 

ಈ ಬಗ್ಗೆ ಪ್ರತಿಕ್ರಿಯಿಸಿರುವ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ(Santosh Hegde) ಅವರು ಸಿದ್ದರಾಮಯ್ಯ ಅವರಿಗೆ ಮಹತ್ವದ ಟಿಪ್ಸ್ ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಮಿತ್ರರ ಜತೆ ಮಾತನಾಡಿದ ಅವರು ಕಾನೂನು ಹೋರಾಟ ಮಾಡಲು ಸಿಎಂ ಸಿದ್ದರಾಮಯ್ಯ ಅವಕಾಶವಿದೆ. ಆದರೆ ಸಾರ್ವಜನಿಕ ದೃಷ್ಟಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಕೆಗೆ ಒಳಪಡುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.

ಅಲ್ಲದೆ ಸಿದ್ದರಾಮಯ್ಯ ಈ ಹಗರಣದಲ್ಲಿ ತನ್ನ ಕೈವಾಡವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಹೈಕೋರ್ಟ್‌ ಆರೋಪಗಳಿಗೆ ಸಂಬಂಧಿಸಿದಂತೆ ಪುರಾವೆ ಇದೆ ಎಂದು ಹೇಳಿದೆ. ಪ್ರಕರಣದ ತನಿಖೆ ಮಾಡುವ ಏಜೆನ್ಸಿ ಯಾವ ನಿರ್ಣಯಕ್ಕೆ ಬರುತ್ತವೆ ಎಂಬುದರ‌ ಮೇಲೆ ಪ್ರಕರಣ ಅಂತ್ಯ ಕಾಣುತ್ತದೆ ಎಂದಿದ್ದಾರೆ.

Leave A Reply

Your email address will not be published.