Kasturi Rangan Report: ಭಾರಿ ವಿರೋಧ: ಕೊನೆಗೂ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ನಿರ್ಧಾರ: ರಾಜ್ಯ ಸಂಪುಟ ಸಭೆಯಲ್ಲಿ ನಿರ್ಣಯ

Kasturi Rangan Report: ಕರ್ನಾಟಕದಲ್ಲಿ(Karnataka) ಪಶ್ಚಿಮ ಘಟ್ಟಗಳ(Western Ghat) ಸಂರಕ್ಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ(Cabinet) ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್(Minister H K Patil) ಮಾಹಿತಿ ನೀಡಿದರು.

 

ಪರಿಸರ ಸಂರಕ್ಷಣೆ ಮತ್ತು ಪ್ರಾಣಿ ಸಂಕೂಲದ ಉಳಿವಿಗಾಗಿ ವರದಿ ಜಾರಿಗೆ ತರಲು ನಿರ್ಧಾರ ಮಾಡಿದ್ದ ಬೆನ್ನಲ್ಲೇ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ವರದಿಯನ್ನು ಕೈಬಿಡಲು ನಿರ್ಧರಿಸಿದೆ ಎಂದರು. ಇನ್ನು ಇತ್ತೀಚೆಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೂಡ ತಿಳಿಸಿದ್ದರು.

ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಉದ್ದೇಶದಿಂದಾಗಿ ಪರಿಸರ ತಜ್ಞ ಮಾಧವ ಗಾಡ್ಗಿಲ್ ಎಂಬುವವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರ ಒಂದು ಸಮಿತಿ ರಚಿಸಿತ್ತು. ಅವರು 2011ರ ಆಗಸ್ಟ್ 31ರಂದು ಸರ್ಕಾರಕ್ಕೆ ತಮ್ಮ ವರದಿ ಸಲ್ಲಿಸಿದ್ದರು.

1 Comment
  1. Bedava bahis says

    Bedava bahis Google SEO, dijital pazarlama stratejimizde büyük bir fark yarattı. https://www.royalelektrik.com/istanbul-elektrikci/

Leave A Reply

Your email address will not be published.