MUDA Case: ಸಿಎಂಗೆ ಢವಢವ: FIR ದಾಖಲಾದ್ರೆ ಸಿಎಂ ಸಿದ್ದರಾಮಯ್ಯ A-1, ಪತ್ನಿA-2 ಆರೋಪಿಗಳು

Share the Article

MUDA Case: ನನ್ನ ರಾಜಕೀಯ ಜೀವನ(Political Life) ಬಿಳಿ ಹಾಳೆಯಷ್ಟೇ ಕ್ಲೀನ್‌(Clean). ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ(Black Mark) ಇಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯನವರು(CM Siddaramaiah) ಈಗ ಮುಡಾ ಹಗರಣದ(MUDA scam) ಬಲೆಯೊಳಗೆ ಸಿಲುಕಿಕೊಂಡಿದ್ದಾರೆ. ಅವರು ಮಾತ್ರವಲ್ಲದೆ ಅವರ ಹೆಂಡತಿ ಕೂಡ ಆರೋಪಿ ಸ್ಥಾನದಲ್ಲಿ ನಿಲ್ಲೋದು ಬಹುತೇಕ ಖಚಿತವಾಗಿದೆ.

ಸೆ.25 ರಂದು ಮುಡಾ ಹಗರಣ ಸಂಬಂಧ ಜನಪ್ರತಿನಿಧಿ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ನೀಡಿದ್ದು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಗರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿದ್ದು, ಸಿಎಂ ಮೇಲೆ ಎಫ್ ಐಆರ್ ದಾಖಲಿಸುವಂತೆ ಜನಪ್ರತಿನಿಧಿ ನ್ಯಾಯಾಲಯ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಸಿಎಂ ಮೇಲೆ FIR ದಾಖಲಾದರೆ ಸಿದ್ದರಾಮಯ್ಯ ಎ1 ಹಾಗೂ ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಲಿದ್ದಾರೆ. ಈಗಾಗಲೇ ಈ ಬಗ್ಗೆ ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಹೋದರ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾರಿದ ದೇವರಾಜು ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ.

Leave A Reply

Your email address will not be published.