Karnataka CM: ಸಿದ್ದರಾಮಯ್ಯ ರಾಜೀನಾಮೆ ಕೊಟ್ರೆ ಮುಂದಿನ ಸಿಎಂ ಇವರಂತೆ !! ಹೈಕಮಾಂಡ್ ಒಲವೂ ಇವರ ಕಡೆಗೇ !! ಡಿಕೆಶಿ, ಜಾರಕಿಹೊಳಿ ಯಾರು ಅಲ್ಲ, ಮತ್ಯಾರು?
Karnataka CM: ಮುಡಾ ಸಂಕಷ್ಟದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರೆ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ. ಅಚ್ಚರಿ ಎಂಬಂತೆ ಸಿದ್ದರಾಮಯ್ಯ ರಾಜೀನಾಮೆ ನೀಡದರೆ ಡಿ ಕೆ ಶಿವಕುಮಾರ್(DK Shivkumar) ಸಿಎಂ ಆಗಲ್ಲ, ಬದಲಿಗೆ ಇವರಂತೆ. ಹೈಕಮಾಂಡ್ ಒಲವು ಇವರ ಮೇಲೆಯೇ ಇರೋದಂತೆ !!
ಸಿಎಂ ಸಿದ್ದರಾಮಯ್ಯ(CM Siddaramaiah) ಅವರಿಗೆ ಮುಡಾ ಪ್ರಕರಣದಲ್ಲಿ (MUDA Case) ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಅವರ ವಿರುದ್ದ ಕೇಳಿ ಬಂದಿದ್ದ ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ತನಿಖೆಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ (Karnataka High Court) ಎತ್ತಿಹಿಡಿದಿದೆ. ಅಲ್ಲದೆ ಈ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ FIR ಕೂಡ ದಾಖಲಾಗಿದೆ. ಹಾಗಿದ್ರೆ ಮುಂದೆ ಸಿಎಂ ಬದಲಾವಣೆ ಆಗೋದು ಫಿಕ್ಸ್ ಆಗಿದೆ ಎನ್ನಲಾಗಿದೆ. ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಆಗಿ ನೇಮಕಮಾಡಲು ಹೈಕಮಾಂಡ್ ಇವರ ಮೇಲೆ ಒಲವು ತೋರಿದೆ, ಆದರೆ ಅದು ಡಿಕೆಶಿ ಅಲ್ಲ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸರ್ಕಾರ ರಚನೆಯಾದಗಿನಿಂದಲೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಒಂದು ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಹೈಕಮಾಂಡ್ ನಾಯಕ ಜೊತೆಗೂ ಹಲವು ಬಾರೀ ಚರ್ಚೆ ನಡೆಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ರೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಮುಂಚೂಣಿಯಲ್ಲಿರಲಿದ್ದಾರೆ. ಆದರೆ ಇಲ್ಲಿ ಒಂದು ಟ್ವಿಸ್ಟ್ ಇದೆ. ಅದೇನೆಂದರೆ ಕಾಂಗ್ರೆಸ್ ಹೈಕಮಾಂಡ್ ಮುಂದಿನ ಸಿಎಂ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನ ಕೇಳಿದ್ರೆ, ಡಿ ಕೆ ಶಿವಕುಮಾರ್ ಹೆಸರನ್ನು ಸಿದ್ದರಾಮಯ್ಯ ಸೂಚಿಸುವುದು ಅನುಮಾನವಾಗಿದೆ. ಹೀಗಾಗಿ ಹೈಕಮಾಂಡ್ ಒಲವು ಡಾ. ಜಿ ಪರಮೇಶ್ವರ್ ಮೇಲಿದೆ ಎನ್ನಲಾಗಿದೆ.
ಯಸ್, ಒಂದು ವೇಳೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾದರೇ ಸಿದ್ದರಾಮಯ್ಯ ಅವರು ಸೂಚಿಸಿದವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಪ್ತರಾದ ಎಂ ಬಿ ಪಾಟೀಲ್ ಅಥವಾ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರು ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ .ಬಿ.ಪಾಟೀಲ್ ಗೂ ಭೂ ಸಂಬಂಧಿತ ಸಮಸ್ಯೆ ತಡೆಯಾಗಬಹುದು.
ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಈ ಹುದ್ದೆಯನ್ನು ಅಲಂಕರಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ಆದರೆ ಅವರನ್ನು ಈ ಸ್ಥಾನಕ್ಕೆ ಪರಿಗಣಿಸುವುದು ಕಷ್ಟ ಎನ್ನಲಾಗಿದೆ. ಬಟ್, ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಮೇಲೆ ಯಾಕೋ ಹೈಕಮಾಂಡ್ ಮನಸ್ಸುಮಾಡಿದಂತೆ ತೋರುತ್ತದೆ. ಯಾಕೆಂದರೆ 2013ರಲ್ಲಿ ಅನಿರೀಕ್ಷಿತ ಸೋಲು ಕಂಡ ಬಳಿಕ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿ ಹೋಯಿತು. ಇದೀಗ ಎಲ್ಲಾ ಸಾಧ್ಯತೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನೋಡಿದರೆ ಮೊದಲು ಕೇಳಿ ಬರುವ ಹೆಸರು ಜಿ. ಪರಮೇಶ್ವರ್. ಹೈಕಮಾಂಡ್ಕೂಡ ಅವರ ಹೆಸರನ್ನೇ ಸೂಚಿಸಬಹುದು ಎನ್ನಲಾಗಿದೆ.