Zameer Ahmed: ಹೈಕೋರ್ಟ್‌ ಆದೇಶದ ಕುರಿತು ಲಘು ಮಾತು; ಜಮೀರ್‌ ಅಹ್ಮದ್‌ಗೆ ನ್ಯಾಯಾಂಗ ನಿಂದನೆ ಸಂಕಷ್ಟ

Share the Article

Zameer Ahmed: ಸಚಿವ ಜಮೀರ್‌ ಅಹ್ಮದ್‌ (Zameer Ahmed) ಅವರ ವಿರುದ್ಧ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ (TJ Abraham) ಅವರು ಅರ್ಜಿ ಸಲ್ಲಿಸಿದ್ದು, ಈ ಮೂಲಕ ಇದೀಗ ಸಚಿವ ಜಮೀರ್‌ ಅಹ್ಮದ್‌ ಅವರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ ಬಂದಿದೆ.

ಮೂಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ ತೀರ್ಪಿನ ಕುರಿತು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಲಘುವಾಗಿ ಮಾತಾಡಿದ್ದು, ” ಹೈಕೋರ್ಟ್‌ ಆದೇಶ ರಾಜಕೀಯ ತೀರ್ಪು” ಎಂಬ ಹೇಳಿಕೆಯನ್ನು ನೀಡಿದ್ದರು. ಇದೀಗ ಜಮೀರ್‌ ಅಹ್ಮದ್‌ ಅವರಿಗೆ ಇದು ಸಂಕಷ್ಟಕ್ಕೆ ಕಾರಣವಾಗಿದೆ.

ಹೈಕೋರ್ಟ್‌ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಆ ಮಾತನ್ನು ಹೇಳಿಲ್ಲ. ಇದು ಬಾಯಿ ತಪ್ಪಿ ಬಂದಿರುವ ಕಾರಣ, ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದೆ. ನನಗೆ ನ್ಯಾಯಾಲಯದ ಬಗ್ಗೆ ಅಪಾರ ಗೌರವ ಇದೆ. ನ್ಯಾಯಾಲಯದ ತೀರ್ಪಿಗೆ ನಾನು ತಲೆ ಬಾಗುತ್ತೇನೆ ಎಂದು ಸಚಿವ ಜಮೀರ್‌ ಅಹ್ಮದ್‌ ಈ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದ್ದಾರೆ.

Leave A Reply