CM Siddaramaiah: ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ – ಸಿಎಂ ಸಿದ್ದರಾಮಯ್ಯ

CM Siddaramaiah: ಪ್ರಸ್ತುತ ಮುಡಾ ಪ್ರಕರಣದ ತನಿಖೆ ಲೋಕಾಯುಕ್ತದಲ್ಲಿದೆ. ಅದರಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ಪ್ರಕರಣ ಸಂಬಂಧ ಅವರ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿದರು. ಇಡಿಯಲ್ಲಿ ಈ ಪ್ರಕರಣದ ಬಗ್ಗೆ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು.

ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ ಕುಮಾರಸ್ವಾಮಿಯವರು ತಪ್ಪೆಸೆಗಿದ್ದಾರೆ. ಹಾಗಿದ್ದು ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡೋದಿಲ್ಲ. ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆ ಟೀಕೆ ಮಾಡುತ್ತಿರುವ ಬಗ್ಗೆ ಸಿಎಂ ಈ ರೀತಿಯಾದ ಪ್ರತಿಕ್ರಿಯೆ ನೀಡಿದರು.

ರೇವ್ ಪಾರ್ಟಿ ವಿರುದ್ದ ಪೊಲೀಸರ ಕ್ರಮ
ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಹಾಗೆ ದಸರಾ ಉತ್ಸವದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ ಸಿಎಂ, ದಸರಾ ಉತ್ಸವಗಳ ಸಿದ್ದತೆಗಾಗಿ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸಿದ್ಧತೆಗಳನ್ನು ವೀಕ್ಷಿಸಲು ಅಕ್ಟೋಬರ್ 2 ರಂದು ಮೈಸೂರಿಗೆ ಆಗಮಿಸಲಿದ್ದೇನೆ ಎಂದು ಮಾಹಿತಿ ನೀಡಿದರು.

Leave A Reply

Your email address will not be published.