ED Case agaisnt CM Siddaramaiah: ಸಿದ್ದರಾಮಯ್ಯ ಮೇಲೆ ಇಡಿ ಪ್ರಕರಣ ದಾಖಲು; ಕೇಜ್ರಿವಾಲ್ ಥರ ಸಿದ್ದರಾಮಯ್ಯ ಬಂಧನ ಆಗುತ್ತಾ ?

Share the Article

ED Case agaisnt CM Siddaramaiah:  ಮುಡಾ ಅಕ್ರಮ ಆಸ್ತಿ ಹಗರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇಡಿ) ಸೋಮವಾರ ಪ್ರಕರಣ ದಾಖಲಿಸಿದೆ. ಲೋಕಾಯುಕ್ತರು ಸಲ್ಲಿಸಿದ್ದ ಪ್ರಥಮ ಮಾಹಿತಿ ವರದಿಯನ್ನು ಜಾರಿ ನಿರ್ದೇಶನಾಲಯ ಗಮನಕ್ಕೆ ತಂದ ನಂತರ ಈ ಪ್ರಕರಣ ದಾಖಲಿಸಲಾಗಿದೆ.

ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ ಪ್ರಾಧಿಕಾರದಿಂದ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಮೈಸೂರಿನ ಶ್ರೀಮಂತ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ನೀಡಲಾಗಿರುವ ಪರಿಹಾರದ ನಿವೇಶನಗಳು ಮುಡಾವು ಸಿದ್ದರಾಮಯ್ಯನವರ ಪತ್ನಿಯಿಂದ ಸ್ವಾಧೀನಪಡಿಸಿಕೊಂಡಿರುವ ಭೂಮಿಗಿಂತ ಹೆಚ್ಚಿನ ಮೌಲ್ಯದಾಗಿದೆ ಎಂದು ಆರೋಪಿಸಲಾಗಿದೆ.

ಇದಕ್ಕೂ ಮೊದಲು, ಕೇಂದ್ರ ಏಜೆನ್ಸಿಗಳು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಸ್ತ್ರ ಬಳಸಿ ಬಂಧಿಸಿದ್ದವು.

Leave A Reply