Election Bond Case: ಚುನಾವಣಾ ಬಾಂಡ್ ಕೇಸ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣ; ನಳಿನ್‌ಕುಮಾರ್ ಕಟೀಲ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

Election Bond Case: ದಕ್ಷಿಣ ಕನ್ನಡ ಕ್ಷೇತ್ರದ ಮಾಜಿ ಬಿಜೆಪಿ ಸಂಸದ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೌದು. ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಕಟೀಲ್ ವಿರುದ್ಧದ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.

ಸೆ.30 (ಇಂದು) ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂಬ ಆರೋಪದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಮೂಲಕ ನಳಿನ್ ಕುಮಾರ್ ಕಟೀಲ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಇನ್ನಿತರರಿಗೆ ಕೂಡಾ ರಿಲೀಫ್ ದೊರಕಿದಂತಾಗಿದೆ. ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಿದೆ.